Select Your Language

Notifications

webdunia
webdunia
webdunia
webdunia

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

Chief Minister Siddaramaiah, world famous Mysore Dussehra, Vijayapur MLA Basanagowda Patil Yatna.

Sampriya

ಬೆಂಗಳೂರು , ಭಾನುವಾರ, 24 ಆಗಸ್ಟ್ 2025 (16:59 IST)
ಬೆಂಗಳೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಬೂಕರ್‌ ಪ್ರಶಸ್ತಿ ವಿಜೇತ ಕನ್ನಡ ಸಾಹಿತಿ ಬಾನು ಮುಷ್ತಾಕ್ ನೆರವೇರಿಸಲಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸರ್ಕಾರದ ಈ ನಡೆಗೆ ಕೆಲ ಹಿಂದು ಸಂಘಟನೆಗಳು ಮತ್ತು ಮೈಸೂರು ಮಾಜಿ ಸಂಸದ ಪ್ರತಾಪ ಸಿಂಹ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ನಾನು ಬಾನು ಮುಷ್ತಾಕ್ ಅವರನ್ನು ವೈಯಕ್ತಿಕವಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದು ಯತ್ನಾಳ್‌ ಹೇಳಿದ್ದಾರೆ.

ಇಸ್ಲಾಂ ಮೂರ್ತಿ ಪೂಜೆಯನ್ನು ಧಿಕ್ಕರಿಸಿ ಒಂದು ದೇವರು ಹಾಗೂ ಒಂದು ಗ್ರಂಥವನ್ನೇ ಒಪ್ಪಿಕೊಳ್ಳುತ್ತದೆ ಎಂಬ ನಂಬಿಕೆಯಲ್ಲಿ ಅವರು ಇನ್ನೂ ಇದ್ದಾರೆಯೇ ಅಥವಾ ಎಲ್ಲಾ ಮಾರ್ಗಗಳೂ ಅಂತಿಮವಾಗಿ ಒಂದೇ ಮೋಕ್ಷಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಅವರು ನಂಬುತ್ತಾರೆಯೇ ಎಂಬುದರ ಬಗ್ಗೆ ಬಾನು ಮುಷ್ತಾಕ್ ಅವರು ಸ್ಪಷ್ಟನೆ ನೀಡುವುದು ಅಗತ್ಯ ಎಂದು ಎಕ್ಸ್‌ನಲ್ಲಿ ಹೇಳಿದ್ದಾರೆ.

ಈ ಸ್ಪಷ್ಟತೆ ಇಲ್ಲದೆ, ದಸರಾ ಉದ್ಘಾಟಿಸುವುದು ಸರಿಯಲ್ಲ. ಆದರೆ, ದಸರಾ ಉತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಅಥವಾ ಕವಿಗೋಷ್ಠಿಯಂತಹ ಸಾಹಿತ್ಯ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಅತಿಥಿಯಾಗಿ ಅವರು ಭಾಗವಹಿಸುವುದು ತಕ್ಕದ್ದಾಗಿದೆ ಎಂದೂ ಹೇಳಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ