ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

Sampriya
ಭಾನುವಾರ, 24 ಆಗಸ್ಟ್ 2025 (16:59 IST)
ಬೆಂಗಳೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಬೂಕರ್‌ ಪ್ರಶಸ್ತಿ ವಿಜೇತ ಕನ್ನಡ ಸಾಹಿತಿ ಬಾನು ಮುಷ್ತಾಕ್ ನೆರವೇರಿಸಲಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸರ್ಕಾರದ ಈ ನಡೆಗೆ ಕೆಲ ಹಿಂದು ಸಂಘಟನೆಗಳು ಮತ್ತು ಮೈಸೂರು ಮಾಜಿ ಸಂಸದ ಪ್ರತಾಪ ಸಿಂಹ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ನಾನು ಬಾನು ಮುಷ್ತಾಕ್ ಅವರನ್ನು ವೈಯಕ್ತಿಕವಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದು ಯತ್ನಾಳ್‌ ಹೇಳಿದ್ದಾರೆ.

ಇಸ್ಲಾಂ ಮೂರ್ತಿ ಪೂಜೆಯನ್ನು ಧಿಕ್ಕರಿಸಿ ಒಂದು ದೇವರು ಹಾಗೂ ಒಂದು ಗ್ರಂಥವನ್ನೇ ಒಪ್ಪಿಕೊಳ್ಳುತ್ತದೆ ಎಂಬ ನಂಬಿಕೆಯಲ್ಲಿ ಅವರು ಇನ್ನೂ ಇದ್ದಾರೆಯೇ ಅಥವಾ ಎಲ್ಲಾ ಮಾರ್ಗಗಳೂ ಅಂತಿಮವಾಗಿ ಒಂದೇ ಮೋಕ್ಷಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಅವರು ನಂಬುತ್ತಾರೆಯೇ ಎಂಬುದರ ಬಗ್ಗೆ ಬಾನು ಮುಷ್ತಾಕ್ ಅವರು ಸ್ಪಷ್ಟನೆ ನೀಡುವುದು ಅಗತ್ಯ ಎಂದು ಎಕ್ಸ್‌ನಲ್ಲಿ ಹೇಳಿದ್ದಾರೆ.

ಈ ಸ್ಪಷ್ಟತೆ ಇಲ್ಲದೆ, ದಸರಾ ಉದ್ಘಾಟಿಸುವುದು ಸರಿಯಲ್ಲ. ಆದರೆ, ದಸರಾ ಉತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಅಥವಾ ಕವಿಗೋಷ್ಠಿಯಂತಹ ಸಾಹಿತ್ಯ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಅತಿಥಿಯಾಗಿ ಅವರು ಭಾಗವಹಿಸುವುದು ತಕ್ಕದ್ದಾಗಿದೆ ಎಂದೂ ಹೇಳಿಕೆ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments