Select Your Language

Notifications

webdunia
webdunia
webdunia
webdunia

KIAL ಟರ್ಮಿನಲ್-2 ಉದ್ಘಾಟನೆ

webdunia
bangalore , ಶುಕ್ರವಾರ, 11 ನವೆಂಬರ್ 2022 (17:14 IST)
ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2ನೇ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದಕ್ಷತೆಯನ್ನು ದ್ವಿಗುಣಗೊಳಿಸುವ ಸಾಮರ್ಥ್ಯ ಹೊಂದಿದೆ. ಹೈಟೆಕ್ ತಂತ್ರಜ್ಞಾನ, ಸುಸ್ಥಿರತೆ ತತ್ವಗಳ ಅತ್ಯಾಧುನಿಕ ವಿನ್ಯಾಸವನ್ನು ಈ ಟರ್ಮಿನಲ್ ಹೊಂದಿದೆ. ಪರಿಸರ ಸ್ನೇಹಿ ಹಾಗೂ ಪ್ರಯಾಣಿಕ ಸ್ನೇಹಿಯಾಗಿದೆ. ಅಷ್ಟೇ ಅಲ್ಲದೆ, ಟರ್ಮಿನಲ್- 2 ಕರ್ನಾಟಕ ಪರಂಪರೆ ಹಾಗೂ ಸಂಸ್ಕೃತಿಯ ಥೀಮ್ ಒಳಗೊಂಡಿದೆ. 13,000 ಕೋಟಿ ವೆಚ್ಚದಲ್ಲಿ ಟರ್ಮಿನಲ್-2 ನಿರ್ಮಿಸಲಾಗಿದೆ. ಉದ್ಘಾಟನೆ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ B.S.ಯಡಿಯೂರಪ್ಪ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಶಾಸಕರ ಭವನದಲ್ಲಿ ಕನಕದಾಸ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವ ಶ್ರೀರಾಮುಲು, ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ್ ಖೂಬಾ ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರಿಗಳೊಂದಿಗೆ ಪ್ರಹ್ಲಾದ್​​​​ ಜೋಶಿ ಸಭೆ