Publish Date: Mon, 27 Feb 2023 (15:41 IST)
Updated Date: Mon, 27 Feb 2023 (15:50 IST)
ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಷ್ಟ್ರಕವಿ ಕುವೆಂಪು ಏರ್ಪೋರ್ಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಸ್ಮಾರ್ಟ್ಸಿಟಿ ಕಾಮಗಾರಿ, ಶಿಮುಲ್ ಹಾಲು ಪ್ಯಾಕಿಂಗ್ ಘಟಕ, ಮಾಮ್ ಕೋಸ್ ಆಡಳಿತ ಭವನ, ಶಿವಮೊಗ್ಗ-ಶಿಕಾರಿಪುರ, ರಾಣೆಬೆನ್ನೂರು ಹೊಸ ರೈಲು ಮಾರ್ಗಕ್ಕೆ ಶಿಲಾನ್ಯಾಸ ಹಾಗೂ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋಗೆ ಶಿಲಾನ್ಯಾಸ ಮಾಡಿದರು. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ B.S. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ BJP ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ನಾರಾಯಣಗೌಡ, ಭೈರತಿ ಬಸವರಾಜ್, C.C. ಪಾಟೀಲ್, ಸಂಸದ B.Y. ರಾಘವೇಂದ್ರ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ರು.