Select Your Language

Notifications

webdunia
webdunia
webdunia
webdunia

ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ : ಬಸವರಾಜ ಬೊಮ್ಮಾಯಿ

ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ : ಬಸವರಾಜ ಬೊಮ್ಮಾಯಿ
ಬೆಂಗಳೂರು , ಸೋಮವಾರ, 28 ನವೆಂಬರ್ 2022 (09:43 IST)
ಬೆಂಗಳೂರು : ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಹಿಂದೆ ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ.

ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದು ಕಾಣುತ್ತಿದೆ. ವಿಷ್ಣುವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರಿಗೆ ಶುಭ ಕೋರಲು ಬಂದಿದ್ದೇನೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ತನಿಖೆ ಹೆಸರಲ್ಲಿ ಟಾರ್ಚರ್ ಕೊಡಬೇಡಿ: ಬಿಬಿಎಂಪಿ