Daily Horoscope
✕

ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಬಜೆಟ್‌ ನಲ್ಲಿ ಉತ್ತೇಜನ

geetha
ಶುಕ್ರವಾರ, 16 ಫೆಬ್ರವರಿ 2024 (18:20 IST)
ಬೆಂಗಳೂರು :  ಕರ್ನಾಟಕ ರಾಜ್ಯ ಬಜೆಟ್‌ ನಲ್ಲಿ ಭರಪೂರ ಕೊಡುಗೆ ಸಿದ್ದರಾಮಯ್ಯ  ನೀಡಿದ್ದಾರೆ.  ನಾವು ನಾವೀನ್ಯತೆ ಮತ್ತು ತಂತ್ರಜ್ಞಾನಕ್ಕೆ ಪೂರಕ ವಾತಾವರಣ ಅಭಿವೃದ್ಧಿಪಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ವಿನೂತನ ಕಾರ್ಯಶೈಲಿ ಹಾಗೂ ಚಿಂತನಾ ಕ್ರಮದ ಅಗತ್ಯವಿದೆ. ನಮ್ಮ ಪರಿಸರವೇ ನಾವೀನ್ಯತೆಯನ್ನು ಉತ್ತೇಜಿಸುವಂತಿರಬೇಕು ಎಂಬ ಭಾರತ ರತ್ನ ಪ್ರೊ.ಸಿ.ಎನ್.ಆರ್.ರಾವ್ ಅವರ ಮಾತನ್ನು ಸಿಎಂ ಸಿದ್ದರಾಮಯ್ಯ ಬಜೆಟ್‌ ವೇಳೆ ಉಲ್ಲೇಖಿಸಿದರು. 
 
ಪ್ರಸಕ್ತ ಕ್ಷೇತ್ರಕ್ಕೆ ಸಿದ್ದರಾಮಯ್ಯ ನೀಡಿರುವ ಕೊಡುಗೆಗಳು ಹೀಗಿವೆ.   

 
• ಸ್ಟಾರ್ಟಪ್ ವಲಯದಲ್ಲಿ ಕರ್ನಾಟಕದ ಮುಂಚೂಣಿಯನ್ನು ಕಾಯ್ದುಕೊಳ್ಳಲು ಮೂರು ಹೊಸ ಕಾರ್ಯಕ್ರಮ
 
• ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಿಂದ ಪ್ರಾರಂಭವಾದ ನವೀನ ಪ್ರಯತ್ನಗಳು, ಸ್ಟಾರ್ಟಪ್ಗಳನ್ನು ಉತ್ತೇಜಿಸಲು ರಾಜೀವ್ ಗಾಂಧಿ ವಾಣಿಜ್ಯೋದ್ಯಮ ಕಾರ್ಯಕ್ರಮಗಳಡಿ ಜ್ಞಾನಾಧಾರಿತ ಮತ್ತು ತಂತ್ರಜ್ಞಾನ ಚಾಲಿತ ಪರಿಕಲ್ಪನೆಗಳು ಮತ್ತು ನಾವೀನ್ಯತೆಗಳ ಪೋಷಣೆ.
 
• ಮಹಿಳಾ ಉದ್ಯಮಿಗಳನ್ನು ಬೆಂಬಲಿಸಲು ಮಹಿಳಾ ಉತ್ಕೃಷ್ಟತೆ ಮತ್ತು ಉದ್ಯಮಶೀಲತೆಯಲ್ಲಿ ಬೆಂಬಲ ಕಾರ್ಯಕ್ರಮ  
 
• ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಅಗ್ರಿ ಇನ್ನೋವೇಶನ್ ಸ್ಟಾರ್ಟ್ಅಪ್ಗಳನ್ನು ಸ್ಥಾಪಿಸಲು ಸಿ-ಕ್ಯಾಂಪ್ನ ಅಗ್ರಿ ಇನ್ನೋವೇಶನ್ ಪಾರ್ಕ್ಗೆ 5 ಎಕರೆ ಭೂಮಿ ಮೀಸಲು
 
• ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯವು ಮೊದಲ ಸ್ಥಾನದಲ್ಲಿದ್ದು, ಈ ಸ್ಥಾನವನ್ನು ಬಲಪಡಿಸಲು ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಉತ್ತೇಜನ ನೀಡಲು ಫಿನ್ಟೆಕ್, ಸ್ಪೇಸ್ಟೆಕ್ ಮತ್ತು ಆಟೋಮೋಟಿವ್ ಟೆಕ್ನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಅನ್ನು ಮುಂದಿನ 5 ವರ್ಷಗಳ ಅವಧಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಉದ್ಯಮಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸಹಯೋಗದೊಂದಿಗೆ ಸ್ಥಾಪನೆ 
 
• ಬೆಂಗಳೂರಿನಾಚೆಗೂ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಯುವಕರ ಕೌಶಲ್ಯಾಭಿವೃದ್ಧಿಗಾಗಿ ಕಲಬುರಗಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ತುಮಕೂರಿನಲ್ಲಿ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ ಮತ್ತು ಕಿಯೋನಿಕ್ಸ್ ಸಹಯೋಗದೊಂದಿಗೆ ಒಟ್ಟಾರೆ 12 ಕೋಟಿ ರೂ. ವೆಚ್ಚದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರಗಳ ಸ್ಥಾಪನೆ
 
• ರಾಜ್ಯದಲ್ಲಿ ಜಿನೋಮಿಕ್ಸ್ನಲ್ಲಿ ಅಧ್ಯಯನ ಮತ್ತು ಸಂಶೋಧನೆಯನ್ನು ಉತ್ತೇಜಿಸಲು ಸುಧಾರಿತ ಜಿನೋಮ್ ಎಡಿಟಿಂಗ್ ಮತ್ತು ಜೀನ್ ಥೆರಪಿ ಕೇಂದ್ರವನ್ನು ಸ್ಥಾಪಿಸಲಾಗುವುದು. ಈ ಸಂಸ್ಥೆಯು ಆರೋಗ್ಯ, ಕೃಷಿ ಮತ್ತು ಜೀವ ವಿಜ್ಞಾನದ ಇತರ ಕ್ಷೇತ್ರಗಳಲ್ಲಿ ಅತ್ಯಾಧುನಿಕ ಸಂಶೋಧನೆಗೆ ಉತ್ತೇಜನ.
 
• ರಾಜ್ಯದಲ್ಲಿ AVGC-XR ಕಂಪನಿಗಳ ಬೆಳವಣಿಗೆಯನ್ನು ಪೋಷಿಸುವ ಮತ್ತು 30,000 ಹೊಸ ಉದ್ಯೋಗ ಸೃಜನೆಯ ಗುರಿಯೊಂದಿಗೆ AVGC-XR 3.0 ನೀತಿಯನ್ನು 2024-29ರ ಅವಧಿಗೆ 
 
• 150 ಕೋಟಿ ರೂ. ಬದ್ಧತಾ ವೆಚ್ಚದೊಂದಿಗೆ ಜಾರಿಗೆ ತರಲಾಗುವುದು. ಇದರೊಂದಿಗೆ Centre of Excellence in Gaming ಅನ್ನು ಸ್ಥಾಪನೆ. 
 
• ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಚಟುವಟಿಕೆ ಆಧಾರಿತ ಪರಿಸರವನ್ನು ಒದಗಿಸಲು 3 ಕ್ರಮ 
 
•ಈಗಾಗಲೇ ಅನುಮೋದನೆಗೊಂಡಿರುವ ಚಾಮರಾಜನಗರ, ಹಾಸನ, ಮಡಿಕೇರಿ, ಶಿರಸಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ ಮತ್ತು ಧಾರವಾಡದಲ್ಲಿ ವಿಜ್ಞಾನ ಕೇಂದ್ರ/ತಾರಾಲಯಗಳ ಕಾರ್ಯಾರಂಭ
 
• ಉಡುಪಿ, ಹಾವೇರಿ, ಚಿತ್ತಾಪುರ, ಆದಿಚುಂಚನಗಿರಿ, ತುಮಕೂರಿನಲ್ಲಿ ವಿಜ್ಞಾನ ಕೇಂದ್ರಗಳ ಕಾಮಗಾರಿಗೆ ವೇಗ
 
• ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಹೊಸದಾಗಿ ಸ್ಥಾಪನೆ . ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ 170 ಕೋಟಿ ರೂ.ಗಳನ್ನು ಮೀಸಲು. 
 
• ವಿದ್ಯಾರ್ಥಿಗಳಿಗೆ ರಾತ್ರಿ ಆಕಾಶ ವೀಕ್ಷಣೆ ಮತ್ತು ಆಕಾಶ ಕಾಯಗಳ ಕುರಿತು ಆಸಕ್ತಿ ಮೂಡಿಸಲು ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಬರುವ ಒಟ್ಟು 833 ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ತಲಾ ಒಂದು ದೂರದರ್ಶಕವನ್ನು ಒಟ್ಟಾರೆ 3 ಕೋಟಿ ರೂ. ವೆಚ್ಚದಲ್ಲಿ ಪೂರೈಕೆ. 
 
• ಬೆಂಗಳೂರು ಇಂಡಿಯಾ ನ್ಯಾನೋ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗುವುದು. ಸಮ್ಮೇಳನದ ಪೂರ್ವಭಾವಿಯಾಗಿ ಜನಸಮುದಾಯದಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ಉದ್ದೇಶದೊಂದಿಗೆ, ಒಂದು ತಿಂಗಳ ಕಾಲ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಉತ್ಸವವನ್ನು ಆಯೋಜನೆ
 
• ಬೆಂಗಳೂರು ನಗರದಲ್ಲಿ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಒಟ್ಟು 233 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ನಗರಿಯನ್ನು (Science City) ಸ್ಥಾಪನೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ