ವಿಧಾನ ಪರಿಷತ್ ಚುನಾವಣೆ ಖರ್ಚಿಗಾಗಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಅಧಿಕಾರಿಗಳಿಂದ ವಸೂಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಗಂಭೀರವಾಗಿ ಆರೋಪಿಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ, ಪರಿಷತ್ ಚುನಾವಣೆ ಖರ್ಚಿಗಾಗಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದು, ಅವರನ್ನು ನಗರದ ಐಬಿಗೆ ಕರೆಸಿ ಸಭೆ ನಡೆಸಿದ್ದಾರೆಂದು ಗಂಭೀರವಾಗಿ ಆರೋಪಿಸಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ವ್ಯಕ್ತಿಗಳಿಗೆ ಐಬಿ ಪ್ರವೇಶವನ್ನು ನಿಷೇಧಿಸಲಾಗಿದೆ. ಆದರೆ, ಸಚಿವ ಎ.ಮಂಜು ಅವರು ಐಬಿಯಲ್ಲಿ ಅಧಿಕಾರಿಗಳನ್ನು ಕರೆದು ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಜಿಲ್ಲಾಧಿಕಾರಿಗಳು ತಕ್ಷಣವೇ ಕ್ರಮ ಜರುಗಿಸದಿದ್ದರೆ ಅವರ ವಿರುದ್ಧವೇ ದೂರು ನೀಡುತ್ತೇವೆ ಎಂದು ಎಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.