Publish Date: Wed, 03 Jan 2024 (17:22 IST)
Updated Date: Wed, 03 Jan 2024 (17:41 IST)
ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಎಂದು ಹರಿಹಾಯ್ದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹುಬ್ಬಳ್ಳಿಯಲ್ಲಿ ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಪ್ರಕರಣಕ್ಕೆ ಮರುಜೀವ ನೀಡಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಪಕ್ಷ ಬಲವಾಗಿ ಖಂಡಿಸುತ್ತದೆ ಕಾಂಗ್ರೆಸ್ ವಿರದ್ಧ ಕಿಡಿಕಾರಿದ್ದಾರೆ.