Select Your Language

Notifications

webdunia
webdunia
webdunia
webdunia

ದೇಶದಲ್ಲಿ ಕೊವಿಡ್​​ ಹೆಚ್ಚಳ

ದೇಶದಲ್ಲಿ ಕೊವಿಡ್​​ ಹೆಚ್ಚಳ
bangalore , ಶುಕ್ರವಾರ, 24 ಮಾರ್ಚ್ 2023 (18:25 IST)
ಭಾರತದಲ್ಲಿ ಕೊರೊನಾ ಪ್ರಕರಣಗಳು ಕ್ರಮೇಣವಾಗಿ ಏರಿಕೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 1,300 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 140 ದಿನಗಳಲ್ಲೇ ಅತ್ಯಧಿಕ ಪ್ರಕರಣ ಇದಾಗಿದೆ. ಭಾರತದಲ್ಲಿ 4.46 ಕೋಟಿ ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ, ಇದುವರೆಗೆ 5,30,816 ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕ, ಗುಜರಾತ್, ಮಹಾರಾಷ್ಟ್ರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೇಶದಲ್ಲಿ 7,605 ಸಕ್ರಿಯ ಪ್ರಕರಣಗಳಿವೆ, ಕೋವಿಡ್ ಪತ್ತೆಗಾಗಿ ಇದುವರೆಗೆ ಒಟ್ಟು 92.06 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ 89,078 ಪರೀಕ್ಷೆಗಳನ್ನು ನಡೆಸಲಾಗಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,41,60,997 ಕ್ಕೆ ಏರಿದೆ, ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಮೆರಿಕದಲ್ಲಿ ಭಾರತ ರಾಯಭಾರ ಕಚೇರಿಗೆ ಭದ್ರತೆ