ಬೆಂಗಳೂರು : ಕೋವಿಡ್ ಹೊಸ ತಳಿ ಓಮಿಕ್ರಾನ್ ಕುರಿತು ನಿಗಾ ಇರಿಸಲಾಗಿದೆ.
ಎರಡು ಹಂತಗಳಲ್ಲಿ ಇದನ್ನು ನಿಭಾಯಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ವೈಜ್ಞಾನಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಹೆಚ್ಚಿನ ತನಿಖೆಗೆ ಎನ್ಸಿಬಿಎಸ್ಗೂ ಮಾದರಿಗಳನ್ನು ಕಳುಹಿಸಲಾಗಿದೆ. ವಿದೇಶಗಳಿಂದ ಬಂದಿರುವ ಪ್ರಯಾಣಿಕರ ಬಗ್ಗೆ ವಿಶೇಷ ನಿಗಾ ಇರಿಸಿದ್ದು, ಸಂಪರ್ಕಿತರ ಪತ್ತೆ ಹಾಗೂ ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂದರು.
ಕ್ಲಸ್ಟರ್ಗಳ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಅಲ್ಲಿ ಪಾಲ್ಗೊಂಡಿದ್ದವರ ಪರೀಕ್ಷೆ ನಡೆಸಿ, 7 ದಿನಗಳ ನಂತರ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಧಾರವಾಡದ ಎಸ್ಡಿಎಂ ಕಾಲೇಜಿನಲ್ಲಿ ಸುಮಾರು 4 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಅದೇ ರೀತಿ ಮೈಸೂರು, ಹಾಸನ ಮತ್ತು ಬೆಂಗಳೂರಿನ ಆನೇಕಲ್ ಕಸ್ಟರ್ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಸಾಮಾನ್ಯ ಪರೀಕ್ಷೆಗಳನ್ನು ಹೆಚ್ಚಿಸಲು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳು ರಾಜ್ಯಗಳ ಜೊತೆಗೆ ಪರಿಶೀಲನಾ ಸಭೆ ನಡೆಸುತ್ತಿದ್ದು, ಸಭೆಯ ನಂತರ ಪರಿಸ್ಥಿತಿ ಅವಲೋಕಿಸಿ ಕ್ರಮ ವಹಿಸಲಾಗುವುದು ಎಂದು ಹೇಳಿದರು.