Select Your Language

Notifications

webdunia
webdunia
webdunia
webdunia

ಹಣಕಾಸು ಇಲಾಖೆ ಅನುಮೋದನೆ ಪಡೆದ ಬೆನ್ನಲ್ಲೇ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ: ಮಧು ಬಂಗಾರಪ್ಪ

Karnataka Finance Department, Minister Madhu Bangarappa, Guest Teachers Salary Hike

Sampriya

ಬೆಳಗಾವಿ , ಸೋಮವಾರ, 9 ಡಿಸೆಂಬರ್ 2024 (18:52 IST)
Photo Courtesy X
ಬೆಳಗಾವಿ: ಹಣಕಾಸು ಇಲಾಖೆಯ ಅನುಮೋದನೆ ಪಡೆದ ನಂತರ ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ಹೆಚ್ಚಿಸುವ ಭರವಸೆಯನ್ನು ಶಿಕ್ಷಣ ಸಚಿವ ಮಧಯ ಬಂಗಾರಪ್ಪ ನೀಡಿದರು.

ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಎಂಎಲ್ ಸಿ ಡಾ.ಧನಂಜಯ ಸರ್ಜಿ ಅವರ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಉತ್ತರಿಸಿದರು.

ಅತಿಥಿ ಶಿಕ್ಷಕರ ಗೌರವಧನವನ್ನು 15 ಸಾವಿರ ಹಾಗೂ 16 ಸಾವಿರ ರೂ.ಗೆ ಪರಿಷ್ಕರಿಸಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವರು ತಿಳಿಸಿದರು. ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷಾಂತ್ಯದ ಅವಧಿಗೆ ನೇಮಕ ಮಾಡಲಾಗಿದೆ.

ಇನ್ನೂ ಅತಿಥಿ ಶಿಕ್ಷಕರಣ ಗೌರವ ಧನ ಹೆಚ್ಚಳದ ಬಗ್ಗೆ ಪ್ರತಿಕ್ರಿಯಿಸಿದ ಅವರು, 2024 ರ ಮಾರ್ಚ್ 25 ರಂದು ಹಣಕಾಸು ಇಲಾಖೆಯು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಪತ್ರ ಬರೆದು ಅತಿಥಿ ಶಿಕ್ಷಕರಿಗೆ ನೀಡುವ ಗೌರವಧನವನ್ನು ಹೆಚ್ಚಿಸಲು 2022, ಜೂನ್ 13 ರಂದು ಕಳುಹಿಸಲಾದ ಪ್ರಸ್ತಾವನೆಯನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದಿತ್ತು.ಈಗ ಹಣಕಾಸು ಇಲಾಖೆಯ ಅನುಮೋದನೆ ಪಡೆದ ನಂತರ ಗೌರವಧನವನ್ನು ಹೆಚ್ಚಿಸಲಾಗುವುದು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಅನುಭವ ಮಂಟಪದ ತೈಲಚಿತ್ರ ನನ್ನ ಕೈಯಿಂದ ಅನಾವರಣಗೊಂಡಿದ್ದ ನನ್ನ ಸೌಭಾಗ್ಯ: ಸಿದ್ದರಾಮಯ್ಯ