Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಮಾಡಿದ ಪಾಪದ ಸಾಲ ತೀರಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ : ಸಿ.ಟಿ. ರವಿ

ಕಾಂಗ್ರೆಸ್ ಮಾಡಿದ ಪಾಪದ ಸಾಲ ತೀರಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ : ಸಿ.ಟಿ. ರವಿ
ಬೆಂಗಳೂರು , ಮಂಗಳವಾರ, 14 ಸೆಪ್ಟಂಬರ್ 2021 (12:01 IST)
ಬೆಂಗಳೂರು : ಕಾಂಗ್ರೆಸ್ ಮಾಡಿದ ಪಾಪದ ಸಾಲ ತೀರಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಪ್ರತಿಭಟನೆ ಮಾಡುವ ನೈತಿಕತೆ ಇಲ್ಲ. ಕಾಂಗ್ರೆಸ್ ನವರು ದಿನಾ ಎತ್ತಿನ ಗಾಡಿಯಲ್ಲಿ ಬರುತ್ತಾರೋ, ಒಂದು ದಿನ ಶೋ ಕೊಡಲು ಮಾತ್ರ ಬಂದಿದ್ದಾರೆ ಎಂದು ಕಾಂಗ್ರೆಸ್ ನ ಎತ್ತಿಗಾಡಿ ಚಲೋ ಪ್ರತಿಭಟನೆ ವಿರುದ್ಧ ಕಿಡಿಕಾರಿದ್ದಾರೆ.
ಬೆಲೆ ಏರಿಕೆ ಭಾರತದಲ್ಲಿ ಮಾತ್ರವಲ್ಲ. ಜಾಗತಿಕ ಮಟ್ಟದಲ್ಲಿ ಏರಿಕೆಯಾಗಿದೆ. ಸಂಕಷ್ಟದ ಕಾರಣದಿಂದಾಗಿ ಈಗ ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆ ನಿಗದಿತ ಸಮಯಕ್ಕೆ ಮಾತ್ರ ಆಗಿರುತ್ತದೆ. ದೇಶದ ಭವಿಷ್ಯದ ಬಗ್ಗೆ ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ನಮ್ಮ ಪಾಲಿನ ಮಾತೃ ಸ್ವರೂಪಿಣಿ : ಹಿಂದಿ ದಿವಸ್ ವಿರುದ್ಧ ಕುಮಾರಸ್ವಾಮಿ ಕಿಡಿ