Publish Date: Wed, 09 Mar 2022 (18:55 IST)
Updated Date: Wed, 09 Mar 2022 (18:58 IST)
ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು ಆದಿಯಾಗಿ ಎಲ್ಲ ಶಾಸಕರ ವೇತನ ಹೆಚ್ಚಳ ಮಾಡಿಕೊಂಡ ಸರ್ಕಾರ ಈಗ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳ ವೇತನ ಹೆಚ್ಚಳಕ್ಕೂ ಮನಸ್ಸು ಮಾಡಿದೆ.
ಈ ಕುರಿತು ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಪ್ರತಿನಿಧಿಗಳ ವೇತನ ಹೆಚ್ಚಳ ಸಂಬಂಧ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.