Daily Horoscope
✕

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

Sampriya
ಶನಿವಾರ, 21 ಫೆಬ್ರವರಿ 2026 (18:48 IST)
ರಾಮನಗರ: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿಗಾಗಿ ಗುದ್ದಾಟ ತೀವ್ರ ಪೈಪೋಟಿ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಶಾಸಕ ಎಚ್‌ಎ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಭಾರೀ ಕುತೂಹಲವನ್ನು ಮೂಡಿಸಿದೆ. 

ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಫೆ. 26ರಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಬರಲು ಸೂಚನೆ ನೀಡಿದೆ. ಅಂದು ನಮ್ಮ ನಾಯಕನಿಗೆ ಒಳ್ಳೆಯದಾಗಲಿದೆ ಎಂದು ಹಾರೈಸಿದ್ದಾರೆ. 

ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಎರಡೂವರೆ ವರ್ಷ ಅಧಿಕಾರ ಪೂರ್ಣಗೊಳಿಸಿದ್ದಾರೆ. ಉಳಿದ ಎರಡೂವರೆ ವರ್ಷದ ಅವಧಿಗೆ ಶಿವಕುಮಾರ್ ಅವರಿಗೆ ಅವಕಾಶ ನೀಡಬೇಕು ಎಂಬುದು ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರ ಬಯಕೆಯಾಗಿದೆ ಎಂದು ಹೇಳಿದರು. 

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವ ಹಿರಿಯ ಸಚಿವ ಸತೀಶ ಜಾರಕಿಹೊಳಿ ಅವರು ಸಹ ನಾಯಕತ್ವ ಗೊಂದಲವನ್ನು ಪರಿಹರಿಸುವಂತೆ ಹೈಕಮಾಂಡ್‌ಗೆ ಒತ್ತಾಯ ಮಾಡಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಮಾಡಿರುವ ಪೋಸ್ಟ್‌ ಕುರಿತು ಪ್ರತಿಕ್ರಿಯಿಸಿದ ಹುಸೇನ್, ‘ನಾನೂ ಸೇರಿದಂತೆ ಪಕ್ಷದ 140 ಶಾಸಕರೂ ನಾಯಕತ್ವ ಬದಲಾವಣೆ ಬೇಕು ಎಂದು ಕೇಳುದ್ದೇವೆ. ಇದರಲ್ಲಿ ಪಟ್ಟಭದ್ರ ಹಿತಾಸಕ್ತಿಯಾಗಲಿ, ಗುಂಪುಗಾರಿಕೆಯಾಗಲಿ ಇಲ್ಲ’ ಎಂದು ಕೌಂಟರ್ ನೀಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಸೀಸನ್ ಆರಂಭ: ಚಿನ್ನದ ಬೆಲೆ ಮತ್ತೆ ಗಗನಕ್ಕೇರಲಿದೆಯೇ, ಮಾರುಕಟ್ಟೆ ತಜ್ಞರ ಲೆಕ್ಕಾಚಾರ ಏನು

ಕರ್ನಾಟಕ ರಾಜ್ಯ ಬೊಕ್ಕಸಕ್ಕೆ ಅತೀ ಹೆಚ್ಚು ಆದಾಯ ತಂದುಕೊಡುವ ಕ್ಷೇತ್ರ ಯಾವುದು

ಮಹಿಳೆಯರ ಹೆಸರಲ್ಲಿ ಸೈಟ್ ಖರೀದಿ: ಯಾವ ಲಾಭಗಳು ಸಿಗುತ್ತವೆ, ಖರೀದಿಗೂ ಮುನ್ನ ಗಮನಿಸಬೇಕಾದ ಅಂಶಗಳೇನು

ಕಬ್ಬು ಬೆಳೆಗಾರರ ಹೋರಾಟ, ಬರ, ಮತಾಂತರ ಕಾಯ್ದೆ ವಿವಾದ: ಬೆಳಗಾವಿ ಅಧಿವೇಶನದಲ್ಲಿ ಸದ್ದು ಮಾಡಲಿರುವ 5 ಪ್ರಮುಖ ಅಂಶಗಳು

Karnataka Weather: ಇಂದು ಸಂಜೆ ರಾಜ್ಯದ ಈ ಭಾಗಗಳಲ್ಲಿ ಮಳೆಯಾಗುವ ಸೂಚನೆ

ಮುಂದಿನ ಸುದ್ದಿ
Show comments