Publish Date: Thu, 16 Jul 2020 (19:07 IST)
Updated Date: Thu, 16 Jul 2020 (19:09 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಗೆ ಬಲವಾಗಿ ಆಗ್ರಹ ಕೇಳಿಬರುತ್ತಿದೆ.
ರಾಜ್ಯದ ಎಲ್ಲ ಸಚಿವರು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜನರ ಆರೋಗ್ಯದ ಬಗ್ಗೆ ರಕ್ಷಣೆ ಮಾಡಲು ಆಗದಿದ್ದರೆ ರಾಜೀನಾಮೆ ನೀಡಲಿ.
ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಬರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯ ಮಾಡಿದ್ದಾರೆ.
ದೇವರೇ ರಕ್ಷಣೆ ಮಾಡಬೇಕು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದ ಹೇಳಿಕೆಗೆ ಈ ರೀತಿ ಡಿಕೆಶಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.