Webdunia - Bharat's app for daily news and videos

Install App

ಹಿಂದೂಗಳ ಮೇಲೆ ಹೆಚ್ಚಿದ ದೌರ್ಜನ್ಯ: ತ್ರಿಪುರಾದ ಹೊಟೇಲ್‌ನಲ್ಲಿ ಬಾಂಗ್ಲಾದವರಿಗೆ ಸೇವೆ ನಿರಾಕರಣೆ

Sampriya
ಭಾನುವಾರ, 8 ಡಿಸೆಂಬರ್ 2024 (16:18 IST)
Photo Courtesy X
ಅಗರ್ತಲಾ (ತ್ರಿಪುರ): ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿರುವ ಬೆನ್ನಲ್ಲೇ ತ್ರಿಪುರಾದ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರ ಸಂಘ ಬಾಂಗ್ಲಾದೇಶದ ನಾಗರಿಕರಿಗೆ ಹೋಟೆಲ್ ಮತ್ತು ರೆಸ್ಟೋರೆಂಟ್ ಸೇವೆಗಳನ್ನು ನಿರಾಕರಿಸಲು ನಿರ್ಧರಿಸಿದೆ.

ಎಲ್ಲಾ ತ್ರಿಪುರಾ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರ ಸಂಘದ ಕಚೇರಿ ಕಾರ್ಯದರ್ಶಿ ಭಾಸ್ಕರ್ ಚಕ್ರವರ್ತಿ ಹೇಳಿಕೆಯಲ್ಲಿ, "ಡಿಸೆಂಬರ್ 2 ರಂದು ನಮ್ಮ ಎಲ್ಲ ಸದಸ್ಯರ ಸಮ್ಮುಖದಲ್ಲಿ ನಾವು ಡಿಸೆಂಬರ್ 2 ರಿಂದ ಬಾಂಗ್ಲಾದೇಶದ ನಾಗರಿಕರಿಗೆ ಯಾವುದೇ ಹೋಟೆಲ್‌ನಲ್ಲಿ ಸೇವೆಯನ್ನು ನೀಡದಿರಲು ನಿರ್ಧಾರ ತೆಗೆದುಕೊಂಡಿದ್ದೇವೆ" ಎಂದು ಹೇಳಿದ್ದಾರೆ.

ನೆರೆಯ ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಅಶಾಂತಿಗೆ ಪ್ರತಿಕ್ರಿಯೆಯಾಗಿ ಈ ಬಲವಾದ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎನ್ನಲಾಗಿದೆ.

ತ್ರಿಪುರಾ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರ ಸಂಘ  ರಾಜ್ಯದಲ್ಲಿ ಬಾಂಗ್ಲಾದೇಶಿ ನಾಗರಿಕರಿಗೆ ಸೇವೆಗಳನ್ನು ಒದಗಿಸುವುದನ್ನು ನಿಷೇಧಿಸಿದೆ. ಈ ನಿರ್ಧಾರವು ತಕ್ಷಣವೇ ಜಾರಿಗೆ ಬಂದಿದ್ದು, ಬಾಂಗ್ಲಾದೇಶದಲ್ಲಿ ಹಿಂದೂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಹೆಚ್ಚುತ್ತಿರುವ ಶೋಷಣೆಯ ಬೆನ್ನಲ್ಲೇ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಪ್ರತಿಕ್ರಿಯಿಸಿ, "ಈ ನಿರ್ಧಾರಕ್ಕೆ ಪ್ರಾಥಮಿಕ ಕಾರಣ ಬಾಂಗ್ಲಾದೇಶದಲ್ಲಿ ನಮ್ಮ ರಾಷ್ಟ್ರಧ್ವಜಕ್ಕೆ ತೋರಿದ ಅಗೌರವ. ಹೆಚ್ಚುವರಿಯಾಗಿ, ಬಾಂಗ್ಲಾದೇಶದ ಹೈಕಮಿಷನ್ ಒಳಗೊಂಡ ಘಟನೆಯು ಮಹತ್ವದ ಪಾತ್ರವನ್ನು ವಹಿಸಿದೆ. ಈ ನಿರ್ಣಯವನ್ನು ರೂಪಿಸಿದೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments