ವಾಣಿಜ್ಯ ತೆರಿಗೆ ಉಪವಿಭಾಗಾಧಿಕಾರಿ ಪತ್ನಿ ಜೊತೆ 15 ಜನರಿಂದ ಅಸಭ್ಯ ವರ್ತನೆ

Webdunia
ಮಂಗಳವಾರ, 10 ಜನವರಿ 2017 (09:29 IST)
ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳು ಒಂದೊಂದಾಗಿ ಹೊರ ಬರುತ್ತಿವೆ. ಮಹಾತ್ಮಾಗಾಂಧಿ ರಸ್ತೆ, ಕಮ್ಮನಹಳ್ಳಿ ಘಟನೆಯಾಯ್ತು, ಮತ್ತೀಗ ವಾಣಿಜ್ಯ ತೆರಿಗೆ ಉಪವಿಭಾಗಾಧಿಕಾರಿ ಪತ್ನಿ ಜತೆ ಸಹ 15 ದುರುಳರು ಅಸಭ್ಯವಾಗಿ ವರ್ತಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿರುವ ಕರ್ನಾಟಕ ರಾಜ್ಯ ಟೆನಿಸ್ ಅಸೋಸಿಯೇಷನ್‌ನಲ್ಲಿ ಈ ಹೇಯ ಕೃತ್ಯ ನಡೆದಿದ್ದು
ಅಸಭ್ಯ ವರ್ತನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. 
 
ಎಸಿ ಅವರು ಪತ್ನಿಯನ್ನು ಬಿಟ್ಟು ಕೌಂಟರ್ ಬಳಿ ಊಟಕ್ಕೆ ಹೋದಾಗ ಈ ಘಟನೆ ನಡೆದದ್ದು, ಪುಂಡರ ತಂಡ ಮಹಿಳೆ ಬಳಿ ಬಂದು ಅಸಬ್ಯವಾಗಿ ವರ್ತಿಸಿದೆ. ಅವರ ಜತೆ ನಿಂತು ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಿದೆ. ಪತಿ ಮರಳಿದ ಮೇಲೆ ಪೀಡಿತ ಮಹಿಳೆ  ಎಲ್ಲ ವಿಷಯವನ್ನು ತಿಳಿಸಿದ್ದಾಳೆ. ಎಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು. 
 
ಐಪಿಸಿ ವಿಭಾಗ 509, 510, 149ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದ್ದು ಆತನನ್ನು ಶಿವರಾಜ್ ಎಂದು ಗುರುತಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ