ಇಂದಿನಿಂದ ರಾಜ್ಯಾದ್ಯಂತ ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಆರಂಭವಾಗಿದೆ. ನೇರ ನೇಮಕಾತಿ ಸೇರಿದಂತೆ ಸುರಕ್ಷತಾ ಕವಚಗಳು, ನಿವೃತ್ತಿ ಸೇವಾ ಸೌಲಭ್ಯಗಳು ಮತ್ತು ಇತರ ಕಲ್ಯಾಣ ಸೌಲಭ್ಯಗಳನ್ನ ನೀಡುವಂತೆ ಆಗ್ರಹಿಸಿ ಪೌರ ಕಾರ್ಮಿಕರು ಆನೇಕಲ್ ಪುರಸಭೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಇತ್ತ ಬೆಳಗಾವಿ ಮಹಾನಗರ ಪಾಲಿಕೆ ಹೊರಗುತ್ತಿಗೆ ಪೌರಕಾರ್ಮಿಕರಿಂದ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.ಪೌರಕಾರ್ಮಿಕರನ್ನ ಸೇವೆ ಖಾಯಂಗೊಳಿಸಬೇಕು.ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ನೀಡಬೇಕು ಎಂದು ಪ್ರತಿಭಟನಾ ನಿರತರು ಸರ್ಕಾರವನ್ನುಒತ್ತಾಯಿಸಿದ್ರು. ಇದೇ ವೇಳೆ ಪ್ರತಿಭಟನಾನಿರತ ಪೌರ ಕಾರ್ಮಿಕರು ದಿಢೀರ್ ರಸ್ತೆ ತಡೆ ನಡೆಸಿದ್ದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.