ನಾಳೆಯಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ರಜೆ ಮಂಜೂರು ಮಾಡದಂತೆ ಸಾರಿಗೆ ಇಲಾಖೆ ಸೂಚನೆ

Sampriya
ಸೋಮವಾರ, 4 ಆಗಸ್ಟ್ 2025 (14:05 IST)
Photo Credit X
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆವೃತ್ತಿಯಿಂದ ಸಾರಿಗೆ ಇಲಾಖೆ ನೌಕರರು ಇದೇ 5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದಾರೆ. ಈ ಮಧ್ಯೆ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದ್ದು, ನೌಕರರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. 

ಇದೇ ಸೋಮವಾರದಿಂದಲೇ ಅನ್ವಯವಾಗುವಂತೆ ಅನಿರ್ದಿಷ್ಟಾವಧಿವರೆಗೆ ಸಾರಿಗೆ ನೌಕರರ ರಜೆಯನ್ನ ರದ್ದುಗೊಳಿಸಿ ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ. ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ, ಉಳಿಯದ ಯಾವುದೇ ರೀತಿಯ ರಜೆಗಳನ್ನು ಮಂಜೂರು ಮಾಡದಂತೆ ಆಯಾ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದೆ,

ನೌಕರರಿಗೆ ಅಗತ್ಯಬಿದ್ದರೆ ವಾರದ ರಜೆ ಕೂಡ ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಿದೆ. ಜೊತೆಗೆ ಇಂದಿನಿಂದಲೇ ಜಾರಿಗೆ ಬರುವಂತೆ ಮುಷ್ಕರದ ಅವಧಿಯಲ್ಲಿ ಕೆಲಸಕ್ಕೆ ಗೈರಾಗುವ ನೌಕರರ ವೇತನವನ್ನೂ ಕಡಿತಗೊಳಿಸುವುದಾಗಿ ಸುತ್ತೋಲೆಯಲ್ಲಿ ಉಲ್ಲೇಖಿಸಿದೆ.  

ಇದೇ 4ರಿಂದ ಮುಷ್ಕರದ ದಿನಗಳಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರ ಪಟ್ಟಿಯಲ್ಲಿ ದಿನವಹಿ/ ಘಟಕವಾರು/ ವರ್ಗಾವಾರು ಸಿದ್ಧಪಡಿಸಿ, ಕೆಲಸ ಮಾಡದಿದ್ದ ದಿನಗಳ ವೇತನ ಕಡಿತಗೊಳಿಸುವುದು. ಅಲ್ಲದೇ, ವಿಶೇಷ ಸೂಚನೆಯಡಿ ನೀಡಿರುವ ನಿರ್ದೇಶನದನ್ವಯ ಕರ್ತವ್ಯಕ್ಕೆ ಗೈರುಹಾಜರಾದ ನೌಕರರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ನಾಲ್ಕು ನಿಗಮಗಳಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ಮುಂದಿನ ಸುದ್ದಿ
Show comments