Daily Horoscope
✕

ಸ್ವಾತಂತ್ರ್ಯ ದಿನಾಚರಣೆ ಹಗುರವಾಗಿ ತಿಳಿದ ಅಧಿಕಾರಿಗಳಿಗೆ ಶಾಕ್ ನೀಡಿದ ಡಿಸಿ

Webdunia
ಶನಿವಾರ, 4 ಆಗಸ್ಟ್ 2018 (18:11 IST)
ಸ್ವಾತಂತ್ರ್ಯ ದಿನಾಚರಣೆಯನ್ನು ಅಚ್ಟುಕಟ್ಟಾಗಿ ಹಾಗೂ ಸಂಭ್ರಮದಿಂದ ಆಚರಿಸಲು ಅನುಕೂಲವಾಗುವ ಹಾಗೆ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗುತ್ತದೆ. ಆದರೆ ಅಧಿಕಾರಿಗಳು ಸಭೆಗೆ ಬರದಿದ್ದರೆ ಹೇಗಾಗಬೇಡ? ಹೀಗಾಗಿ ಅಧಿಕಾರಿಗಳ ಗೈರುಹಾಜರಿಗೆ ಅಸಮಧಾನಗೊಂಡ ಜಿಲ್ಲಾಧಿಕಾರಿಯು ಅಧಿಕಾರಿಗಳ ವಿರುದ್ಧ ಛಾಟಿ ಬೀಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯನ್ನು ಹಗುರವಾಗಿ ತಿಳಿದು ಪೂರ್ವಭಾವಿ ಸಿದ್ಧತಾ ಸಭೆಗೆ ಗೈರು ಹಾಜರಾದ 22 ಅಧಿಕಾರಿಗಳಿಗೆ ನೋಟೀಸು ಜಾರಿ ಮಾಡುವಂತೆ ಕಲಬುರಗಿ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಭಾರತ ದೇಶಕ್ಕೆ ಆಗಸ್ಟ್ 15ರಂದು ಸ್ವಾತಂತ್ರ್ಯ ದೊರೆತಿದೆ. ಸ್ವಾತಂತ್ರ್ಯ ದೊರೆತಿರುವುದರಿಂದಲೇ ಎಲ್ಲರೂ ತಮ್ಮ ಇಷ್ಟದಂತೆ ಹಾಗೂ ಗೌರವಯುತವಾಗಿ ಬದುಕುವಂತಾಗಿದೆ.  ಸ್ವಾತಂತ್ರ್ಯ ದಿನಾಚರಣೆಯನ್ನು ಸರ್ಕಾರಿ ಅಧಿಕಾರಿಗಳು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದರು.
ಪೂರ್ವಭಾವಿ ಸಿದ್ಧತಾ ಸಭೆಗೆ ಗೈರು ಹಾಜರಾದ ಅಧಿಕಾರಿಗಳು ಯಾವುದೇ ಅನುಮತಿ ಪಡೆದಿಲ್ಲ. ಅವರಿಗೆ ನೋಟೀಸು ಜಾರಿ ಮಾಡುವುದಲ್ಲದೇ ರವಿವಾರದಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿರುವ ಗೈರು ಹಾಜರಾದ ಅಧಿಕಾರಿಗಳ ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments