Select Your Language

Notifications

webdunia
webdunia
webdunia
webdunia

ಭಾರತ ಬಂದ್: ಯಾದಗಿರಿಯಲ್ಲಿ ಉತ್ತಮ ಪ್ರತಿಕ್ರಿಯೆ

ಭಾರತ ಬಂದ್: ಯಾದಗಿರಿಯಲ್ಲಿ ಉತ್ತಮ ಪ್ರತಿಕ್ರಿಯೆ
ಯಾದಗಿರಿ , ಸೋಮವಾರ, 10 ಸೆಪ್ಟಂಬರ್ 2018 (17:55 IST)
ಭಾರತ ಬಂದ್ ಗೆ ಯಾದಗಿರಿಯಲ್ಲಿ ಉತ್ತಮ ಪ್ರತಿಕ್ರಿಯೆ  ವ್ಯಕ್ತವಾಗಿದೆ.
ಭಾರತ್ ಬಂದ್ ಹಿನ್ನಲೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಗಾಂಧಿ ಮೈದಾನದಿಂದ ಸಿಹಿ ನೀರಿನ ಬಾವಿ ಅಂಬಿಗರ ಚೌಡಯ್ಯ ವೃತ್ತ, ಮತ್ತು ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.

ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಿಂದ ಬಸವೇಶ್ವರ  ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಿತು.
ತೈಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರಕಾರದ ಕ್ರಮ ಖಂಡಿಸಿ ಹಾಗೂ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಕೇಂದ್ರ ಸರ್ಕಾರಕ್ಕೆ ಕೂಡಲೇ ಪೆಟ್ರೋಲ್, ಡೀಸೆಲ್‌ ಹಾಗೂ ಗ್ಯಾಸ್ ಬೆಲೆ ಇಳಕೆ ಮಾಡುವಂತೆ ಆಗ್ರಹವನ್ನು ಪ್ರತಿಭಟನಾಕಾರರು ಮಾಡಿದರು.

ಮೆರವಣಿಗೆಯಲ್ಲಿ ಕಾಂಗ್ರೆಸ್ ನ ಪ್ರಮುಖ ನಾಯಕರು ಹಾಗೂ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು. ಬಂದ್ ಅಂಗವಾಗಿ ವ್ಯಾಪಾರ, ವಹಿವಾಟು ಸ್ಥಗಿತಗೊಂಡಿತ್ತು. ವಾಹನಗಳ ಸಂಚಾರ ವಿರಳವಾಗಿತ್ತು. ಜನಜೀವನ ಅಸ್ತವ್ಯಸ್ತವಾಗಿತ್ತು.

 

 

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಯಾಗದೇ ಕೈಕೊಟ್ಟ ಉಪನ್ಯಾಸಕನ ಬಂಧನ