Publish Date: Tue, 07 Jan 2020 (19:21 IST)
Updated Date: Tue, 07 Jan 2020 (19:23 IST)
ಕೇಂದ್ರ ಸರಕಾರದ ನಡೆ ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಭಾರತ ಬಂದ್ ಗೆ ಕರೆ ನೀಡಿವೆ.
ಆದರೆ ರಾಜ್ಯದಲ್ಲಿ ಶಾಲೆ-ಕಾಲೇಜುಗಳಿಗೆ ಬಂದ್ ವೇಳೆ ರಜೆ ಘೋಷಣೆ ಮಾಡಲಾಗಿಲ್ಲ. ಹೀಗಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಸುರಕ್ಷತೆ ಮುಖ್ಯವಾಗುತ್ತದೆ. ಹೀಗಾಗಿ ಎಲ್ಲಾ ಕಡೆಗಳಲ್ಲಿ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ ಅಂತ ತಿಳಿಸಿದ್ದಾರೆ.
ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಶಾಲೆ-ಕಾಲೇಜುಗಳಿಗೆ ಭದ್ರತೆ ಒದಗಿಸುವಂತೆ ಸೂಚನೆ ನೀಡಲಾಗಿದೆ ಅಂತ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.