Webdunia - Bharat's app for daily news and videos

Install App

ಭಾರತ ಬಂದ್ : ಸೆ.10ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Webdunia
ಭಾನುವಾರ, 9 ಸೆಪ್ಟಂಬರ್ 2018 (17:43 IST)
ವಿವಿಧ ಪಕ್ಷಗಳು ಹಾಗೂ ಸಂಘಟನೆಗಳು ಸೆಪ್ಟೆಂಬರ್ 10 ರಂದು ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡಲು ಹಾಗೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ಪರಿಸ್ಥಿತಿ ನೋಡಿಕೊಂಡು ಇನ್ನೂ ಕೆಲವು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ.  

ಕಲಬುರಗಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಿ ಡಿಸಿ ಆರ್. ವೆಂಕಟೇಶ ಕುಮಾರ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಸರ್ಕಾರದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಾಗೂ ಸಿ.ಪಿ.ಐ.ಎಂ, ಸಿ..ಪಿಐ., ಎಸ್.ಯು.ಸಿ.ಐ., ಕೆ.ಎಸ್.ಆರ್.ಟಿ.ಸಿ. ಸ್ಟಾಫ್ ಮತ್ತು ವರ್ಕರ್ಸ್ ಫೆಡರೇಷನ್, ಎ.ಐ.ಟಿ.ಯು.ಸಿ., ಜೆ.ಡಿ.ಎಸ್ ಪಕ್ಷ, ದಲಿತ ಸಂಘಟನೆಗಳು, ಕಲಬುರ್ಗಿ ಜಿಲ್ಲಾ ಲಾರಿ ಮಾಲೀಕರ ಸಂಘ ಹಾಗೂ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 10 ರಂದು ಬಂದ್ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನೀಡಿರುವ ವರದಿಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯಾದ್ಯಂತ  ಆಚರಿಸುವ ಬಂದ್  ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಾಗೂ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments