ಸಿಟಿ ರವಿ ಸ್ವಾತಂತ್ರ್ಯ ತಂದುಕೊಟ್ಟಿದ್ದು: ಡಿಕೆಶಿ ಲೇವಡಿ

Webdunia
ಭಾನುವಾರ, 22 ಆಗಸ್ಟ್ 2021 (17:26 IST)
ಬೆಂಗಳೂರು: 'ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೆ ಸಿ.ಟಿ ರವಿ. ಅವರಿಂದಲೇ ಸ್ವಾತಂತ್ರ್ಯ ಬಂದಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ.
'ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಬಿಜೆಪಿ ನಾಯಕರ ಕೊಡುಗೆ ಹೆಚ್ಚಾಗಿದೆ' ಎಂಬ ಸಿ.ಟಿ ರವಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮದವರು ಭಾನುವಾರ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯಿಸಿದರು.
'ಹೌದು, ಸಿ.ಟಿ. ರವಿ ಅವರಿಂದಲೇ ಈ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ' ಎಂದರು. ಇನ್ನು ಕಾಂಗ್ರೆಸ್ ನಾಯಕರು ಮಾನಸಿಕ ಅಸ್ವಸ್ಥರಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, 'ನಾವು ಈಗಲೇ ನಿಮ್ಹಾನ್ಸ್ ಗೆ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುತ್ತೇವೆ' ಎಂದು ಟಾಂಗ್ ಕೊಟ್ಟರು.
ಇನ್ನು ವಿನಯ್ ಕುಲಕರ್ಣಿ ಅವರ ವಿಚಾರವಾಗಿ ಕೇಳಿದ ಪ್ರಶ್ನೆಗಳಿಗೆ, 'ವಿನಯ್ ಕುಲಕರ್ಣಿ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವರಾಗಿದ್ದು, ಅವರು ಕಾಂಗ್ರೆಸ್ ನ ಭಾಗ. ವಿನಯ್ ಕುಲಕರ್ಣಿ ಅವರ ಮೇಲೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿರುವುದು ಸಂತೋಷ. ಆದರೆ, ಇದೇ ರೀತಿ ಜನಾಶೀರ್ವಾದ ಯಾತ್ರೆ ಮೂಲಕ ಕೋವಿಡ್ ನಿಯಮ ಉಲ್ಲಂಘನೆ ಮಾಡಿರುವ ಕೇಂದ್ರ ಸಚಿವರ ವಿರುದ್ಧ ಯಾಕೆ ಪ್ರಕರಣ ದಾಖಲಿಸಿಲ್ಲ. ಬಿಜೆಪಿ ಕಾರ್ಯಕರ್ತರ ಸಭೆ ಮಾಡಿದಾಗ ಯಾಕೆ ಪ್ರಕರಣ ದಾಖಲಿಸಿಲ್ಲ. ಸರ್ಕಾರ ತಮಗೆ ಬೇಕಾದ ರೀತಿಯಲ್ಲಿ ಕಾನೂನು ಬಳಕೆ ಮಾಡಿಕೊಳ್ಳುತ್ತಿದೆ' ಎಂದು ಕಿಡಿಕಾರಿದರು.
ಶಾಸಕ ಜಮೀರ್ ಅವರ ಬಗ್ಗೆ ಕೇಳಿದ ಪ್ರಶ್ನೆಗೆ, 'ಇಡಿ ದಾಳಿ ವಿಚಾರವಾಗಿ ಶಾಸಕ ಜಮೀರ್ ಅಹ್ಮದ್ ಅವರು ಸ್ಪಷ್ಟನೆ ನೀಡಿದ್ದಾರೆ. ನಿರಪರಾಧಿಗಳಿಗೆ, ರಾಜಕೀಯ ದ್ವೇಷದ ದಾಳಿಗೆ ಒಳಗಾದವರಿಗೆ ನಾವು ಸ್ಪಂದಿಸಬೇಕು. ಅದನ್ನು ಮಾಡುತ್ತಿದ್ದೇವೆ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿಎಂಸಿಯಲ್ಲಿ ಬಂಡಾಯದ ಭಾವುಟ ಹಾರಿಸಿದ ಸಂಸದರಿಂದ ಸ್ಪೀಕರ್ ಭೇಟಿ

2047ರ ವಿಕಸಿತ ಭಾರತದ ಸಂಕಲ್ಪವನ್ನು ಈಡೇರಿಸಲು ದೇಶ ಸಜ್ಜಾಗಿದೆ

ಗ್ಯಾರಂಟಿ ನಿಲ್ಲಿಸಲಾಗುತ್ತದೆ ಎಂಬ ಬಿಜೆಪಿ ಆರೋಪ ಬೆನ್ನಲ್ಲೇ ಕ್ಲಾರಿಟಿ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ಒಂದೊಂದೇ ನೆಪವೊಡ್ಡಿ ಗ್ಯಾರಂಟಿಗೆ ಫಲಾನುಭವಿಗಳ ಸಂಖ್ಯೆ ಇಳಿಸುವುವಲ್ಲಿ ಕಾಂಗ್ರೆಸ್

Video, ಬಂಗೀ ಜಂಪ್ ವೇಳೆ ಸುರಕ್ಷತಾ ಹಗ್ಗವನ್ನೇ ಹಾಕಲು ಮರೆತ ಸಿಬ್ಬಂದಿ, ಯುವತಿಯ ಕೊನೆ ಕ್ಷಣದ ವಿಡಿಯೋ ಭಯ ಹುಟ್ಟಿಸುತ್ತದೆ

ಮುಂದಿನ ಸುದ್ದಿ
Show comments