Select Your Language

Notifications

webdunia
webdunia
webdunia
webdunia

ಭಾರತ ಸೂಪರ್ ಪವರ್ ದೇಶವಾಗಿದೆ : ಶೋಭಾ ಕರಂದ್ಲಾಜೆ

ಭಾರತ ಸೂಪರ್ ಪವರ್ ದೇಶವಾಗಿದೆ : ಶೋಭಾ ಕರಂದ್ಲಾಜೆ
ಬೆಂಗಳೂರು , ಶುಕ್ರವಾರ, 3 ಜೂನ್ 2022 (14:23 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಸೂಪರ್ ಪವರ್ ದೇಶವಾಗಿದೆ ಅಂತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಮೋದಿ ನೇತೃತ್ವದ ಸರ್ಕಾರಕ್ಕೆ 8 ವರ್ಷ ತುಂಬಿದ ಹಿನ್ನಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2014ರಲ್ಲಿ ಮೋದಿಯವರು ದೇಶದಲ್ಲಿ ವಿಕಾಸ ಆಗಬೇಕು. ವಿದೇಶದಲ್ಲಿ ಭಾರತಕ್ಕೆ ಗೌರವ ಸಿಗಬೇಕು. ಭ್ರಷ್ಟಾಚಾರ ನಿರ್ಮೂಲನೆ ಆಗಬೇಕು.

ದೇಶದ ಸೈನ್ಯಕ್ಕೆ ಗೌರವ ಸಿಗಬೇಕು ಎಂಬ ವಿಷಯಗಳನ್ನು ಇಟ್ಟುಕೊಂಡು ದೇಶದ ಪ್ರವಾಸ ಮಾಡಿದ್ದರು. ಎಂಟು ವರ್ಷದಲ್ಲಿ ಮೋದಿ ಮಂತ್ರಿ ಮಂಡಲದ ಯಾವುದೇ ಸಚಿವರ ಮೇಲೆ ಭ್ರಷ್ಟಾಚಾರ ಆರೋಪ ಇಲ್ಲ.

ಯುಪಿಎ ಸರ್ಕಾರದ ಅವಧಿಯಲ್ಲಿ ಮನಮೋಹನ್ ಸಿಂಗ್ ವಿದೇಶಕ್ಕೆ ಹೋದರೆ ಅವರನ್ನು ಗೌರವದಿಂದ ನೋಡುತ್ತಿರಲಿಲ್ಲ. ಈಗ ನಮ್ಮ ಪ್ರಧಾನಿ ವಿದೇಶಕ್ಕೆ ಹೋದರೆ ಕೆಂಪು ಹಾಸಿನ ಸ್ವಾಗತ ದೊರೆಯುತ್ತದೆ ಎಂದರು.

ವಿದೇಶದಲ್ಲಿ ಮೋದಿಗೆ ಗೌರವ ದೊರೆತರೆ ಅದು ಭಾರತಕ್ಕೆ ಸಿಕ್ಕ ಗೌರವ. ಉಕ್ರೇನ್ ಯುದ್ಧ ಭೂಮಿಯಲ್ಲಿ ಸಿಲುಕಿದ್ದ 20 ಸಾವಿರ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಬರುವ ಕೆಲಸ ಮಾಡಿದ್ದಾರೆ.

ಉಕ್ರೇನ್ ಪ್ರಧಾನಿ ಮತ್ತು ರಷ್ಯಾ ಅಧ್ಯಕ್ಷರಿಗೆ ನೇರವಾಗಿ ದೂರವಾಣಿ ಮೂಲಕ ಮಾತನಾಡಿದ ವಿಶ್ವದ ಏಕೈಕ ಪ್ರಧಾನಿ ನರೇಂದ್ರ ಮೋದಿ ಅವರು. ಇದು ಭಾರತಕ್ಕೆ ಸಿಕ್ಕ ಗೌರವ. ಮಧ್ಯಪ್ರಾಚ್ಯ ರಾಷ್ಟ್ರಗಳೊಂದಿಗೂ ಭಾರತ ಉತ್ತಮ ಸಂಬಂಧ ಇಟ್ಟುಕೊಂಡಿದೆ ಎಂದು ಹೇಳಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ !