Publish Date: Fri, 19 Apr 2024 (19:45 IST)
Updated Date: Fri, 19 Apr 2024 (19:48 IST)
ದಾಮೋಹ್: ಈ ಲೋಕಸಭೆ ಚುನಾವಣೆಯಲ್ಲಿ ಭಾರತವನ್ನು ಬೃಹತ್ ಜಾಗತಿಕ ಶಕ್ತಿಯನ್ನಾಗಿ ಮಾಡಲಾಗುವುದೆಂದು ಸಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮಧ್ಯಪ್ರದೇಶದ ದಾಮೋಹ್‌ನಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಿಗಳಿಂದಾಗ ಭಾರತ ರಕ್ಷಣಾ ದುರ್ಬಲಗೊಳಿಸಿದೆ ಎಂದು ಆರೋಪಿಸಿದ ಅವರು ಬಿಜೆಪಿ ಅಧಿಕಾರದಲ್ಲಿ ರಕ್ಷಣಾ ಕ್ಷೇತ್ರವನ್ನು ಬಲಪಡಿಸಿದೆ ಎಂದರು.
ಫ್ರಾನ್ಸ್ ನಿರ್ಮಿತ ರಫೇಲ್ ಯುದ್ಧ ವಿಮಾನಗಳು ಭಾರತಕ್ಕೆ ಬರುವುದು ವಿರೋಧ ಪಕ್ಷಕ್ಕೆ ಇಷ್ಟವಿರಲಿಲ್ಲ ಎಂದು ಮೋದಿ ಆರೋಪಿಸಿದ್ದಾರೆ.
ದೇಶದ ಸುಮಾರು 80ಕೋಟಿ ಫಲಾನುಭವಿಗಳಿಗೆ ಉಚಿತ ಪಡಿಚತ ಯೋಜನೆಯನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಿದೆ. ಕೇಂದ್ರ ಬಿಜೆಪಿ ಸರ್ಕಾರವು ಬಡವರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದರು.