ತವರೂರಿನಲ್ಲೇ ಸಿದ್ದರಾಮಯ್ಯರವರ ಕನಸಿನ ಕೂಸಾದ ಇಂದಿರಾ ಕ್ಯಾಂಟೀನ್ ಬಂದ್

ಮಂಗಳವಾರ, 6 ಆಗಸ್ಟ್ 2019 (10:57 IST)
ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕನಸಿನ ಕೂಸಾದ ಇಂದಿರಾ ಕ್ಯಾಂಟೀನ್ ಇದೀಗ ಸಿದ್ದರಾಮಯ್ಯ ಅವರ ತವರೂರಿನಲ್ಲೇ ಕ್ಲೋಸ್ ಆಗುವ ಹಂತಕ್ಕೆ ಬಂದು ನಿಂತಿದೆ.
ಹೌದು. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರಿಗಾಗಿ, ಕೂಲಿ ಕಾರ್ಮಿಕರಿಗಾಗಿ ಹಲವೆಡೆ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತಂದಿತ್ತು. ಆದರೆ ಇದೀಗ  ಟೆಂಡರ್‌ ದಾರ ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಇಂದಿರಾ ಕ್ಯಾಂಟೀನ್ ನನ್ನು ಕ್ಯಾಂಟೀನ್ ಬಂದ್ ಮಾಡಲಾಗಿದೆ.


ಟೆಂಡರ್‌ ದಾರ ಸುಮಾರು 6 ತಿಂಗಳ ಹಣ ಬಾಕಿ ಉಳಿಸಿಕೊಂಡಿದ್ದಾರೆ. ಇದರಿಂದ ಸಿಬ್ಬಂದಿಗಳಿಗೆ ಸಂಬಳ ನೀಡಲು ಕಷ್ಟವಾಗಿದೆ. ಹೀಗಾಗಿ ವ್ಯವಸ್ಥಾಪಕರು ವ್ಯವಸ್ಥಾಪಕರು ಬಂದ್ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಆರ್ಟಿಕಲ್ 370 ರದ್ದು ಮಾಡಿದ್ದಕ್ಕೆ ಕಾಶ್ಮೀರಿಗಳ ಪ್ರತಿಕ್ರಿಯೆ ಹೇಗಿದೆ ಗೊತ್ತಾ?