Webdunia - Bharat's app for daily news and videos

Install App

ದೇಶಾದ್ಯಂತ ಇಂದು ಕೈಗಾರಿಕೆಗಳು ಬಂದ್, 35 ಸಾವಿರ ಕೋಟಿ ರೂ. ನಷ್ಟ ಸಾಧ್ಯತೆ

Webdunia
ಸೋಮವಾರ, 20 ಡಿಸೆಂಬರ್ 2021 (21:48 IST)
ಕಚ್ಚಾ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಇಂದು ದೇಶಾದ್ಯಂತ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ವಲಯದ ಉದ್ಯಮಗಳು ದೇಶವ್ಯಾಪಿ ಮುಷ್ಕರ ಕೈಗೊಂಡಿದ್ದು, ಇಂದು ದೇಶಾದ್ಯಂತ ಸಣ್ಣ ಕೈಗಾರಿಕೆಗಳು ಬಂದ್ ಆಗಲಿವೆ.
ಎಂಎಸ್‌ಎಂಇ ಬಂದ್ ನಿಂದಾಗಿ ಸುಮಾರು 35 ಸಾವಿರ ಕೋಟಿ ರೂ.
ನಷ್ಟು ಉತ್ಪಾದನೆ ನಷ್ಟವಾಗಲಿದೆ. 10 ಲಕ್ಷ ಕೈಗಾರಿಕೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದ್ದು, ಇಷ್ಟೊಂದು ಪ್ರಮಾಣದ ಉತ್ಪಾದನೆ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ.
ಅಖಿಲ ಭಾರತ ಎಂಎಸ್‌ಎಂಇ ಸಂಘಟನೆಯ ಸದಸ್ಯ ಆರ್. ರಾಮಮೂರ್ತಿ ಅವರು, ಕಚ್ಚಾವಸ್ತು ಬೆಲೆ ದಿನೇದಿನೇ ಏರಿಕೆಯಾಗುತ್ತಿದೆ. ಎಲ್ಲಾ ರೀತಿಯ ಕಚ್ಚಾವಸ್ತುಗಳ ಬೆಲೆ ಏರಿದ್ದರೂ, ಸರ್ಕಾರ ನಿಯಂತ್ರಣಕ್ಕೆ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಕೈಗಾರಿಕೆ ವಲಯದ ಉತ್ಪಾದನೆ ಮತ್ತು ದುಡಿಯುವ ಬಂಡವಾಳದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ. ಕಚ್ಚಾ ವಸ್ತುಗಳ ಬೆಲೆಯನ್ನು ಇಳಿಕೆ ಮಾಡಬೇಕೆಂಬುದೇ ಸಣ್ಣ ಕೈಗಾರಿಕೆಗಳ ಪ್ರಮುಖ ಬೇಡಿಕೆಯಾಗಿದ್ದು, ಇಂದು ದೇಶಾದ್ಯಂತ ಸಣ್ಣ ಕೈಗಾರಿಕೆಗಳು ಸ್ಥಗಿತವಾಗಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments