Publish Date: Sat, 14 Sep 2019 (13:06 IST)
Updated Date: Sat, 14 Sep 2019 (13:08 IST)
ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪನವರ ಮೇಲೆ ಅನರ್ಹ ಶಾಸಕರು ಗರಂ ಆಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ನಿನ್ನೆ ರಾತ್ರಿ ಮುಖ್ಯಮಂತ್ರಿ ಯಡಿಯೂರಪ್ಪನವರ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸಕ್ಕೆ ತೆರಳಿದ್ದ ಅನರ್ಹ ಶಾಸಕರುಗಳಾದ ಎಂಟಿಬಿ ನಾಗರಾಜ್, ವಿಶ್ವನಾಥ್, ನಾರಾಯಣಗೌಡ, ಮುನಿರತ್ನ ಮೊದಲಾದವರು, ನಮ್ಮನ್ನು ನೋಡಿಕೊಳ್ಳುವ ರೀತಿ ಇದೇನಾ ಎಂದು ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆಂದು ಹೇಳಲಾಗಿದೆ.
ಈ ವೇಳೆ ಅನರ್ಹ ಶಾಸಕರನ್ನು ಸಮಾಧಾನಗೊಳಿಸಿದ ಸಿಎಂ, ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡುತ್ತೇನೆ. ಕೆಲ ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ. ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಬೇಡಿ ಎಂದು ಮನವಿ ಮಾಡಿದರೆನ್ನಲಾಗಿದೆ.