Publish Date: Sat, 18 Dec 2021 (10:54 IST)
Updated Date: Sat, 18 Dec 2021 (10:56 IST)
ಮಂಗಳೂರು : ಹೈರಿಸ್ಕ್ ದೇಶ ಘಾನಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಯಾವುದೇ ರೋಗ ಲಕ್ಷಣವಿಲ್ಲದಿದ್ದರೂ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾಗಿದೆ.
ಆ ಪ್ರಯಾಣಿಕನ ಹತ್ತಿರದ ಸೀಟಿನ ಒಟ್ಟು 27 ಪ್ರಯಾಣಿಕರಿಗೆ ಟೆಸ್ಟ್ ನಡೆಸಿ ಕ್ವಾರೆಂಟೈನ್ ಮಾಡಲಾಗಿದೆ. ಪಾಸಿಟಿವ್ ಬಂದಿರುವ ಪ್ರಯಾಣಿಕರ ಗಂಟಲು ದ್ರವ್ಯವನ್ನು ಜನೋಮಿಕ್ ಸೀಕ್ವೆನ್ಸ್ ಪರೀಕ್ಷೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.