Webdunia - Bharat's app for daily news and videos

Install App

ಲಂಚ ಪಡೆಯುತ್ತಿದ್ದ ವೇಳೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಮಾಹಿತಿ ಆಯೋಗದ ಆಯುಕ್ತ

Information Commission Commissioner Ravindra Gurunath  Lokayukta Police  Bribe Case
Sampriya
ಗುರುವಾರ, 27 ಮಾರ್ಚ್ 2025 (17:46 IST)
ಕಲಬುರಗಿ : ಕಪ್ಪು ಪಟ್ಟಿಯಿಂದ ಆರ್ ಟಿಐ ಕಾರ್ಯಕರ್ತ ಹೆಸರು ತೆಗೆಯಲು ಹಣದ ಬೇಡಿಕೆ ಇಟ್ಟು, ಹಣ ಪಡೆಯುತ್ತಿದ್ದ ವೇಳೆ ರಾಜ್ಯ ಮಾಹಿತಿ ಆಯೋಗದ ಆಯುಕ್ತರೊಬ್ಬರು  ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕಲಬುರಗಿ ಪೀಠದ ಆಯುಕ್ತರಾಗಿರುವ ರವೀಂದ್ರ ಗುರುನಾಥ ಡಾಕಪ್ಪ ಲೋಕಾಯುಕ್ತರ ಬಲೆಗೆ ಬಿದ್ದಿರುವ ಅಧಿಕಾರಿ.

ರವೀಂದ್ರ ಗುರುನಾಥ ಡಾಕಪ್ಪ ಅವರು, ಕಲಬುರಗಿಯ ತಮ್ಮ ಕಚೇರಿಯಲ್ಲಿ ಹಣ ತೆಗೆದುಕೊಳ್ಳುತ್ತಿದ್ದ ವೇಳೆಯಲ್ಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಡಾಕಪ್ಪ, ಬ್ಲಾಕ್ ಲಿಸ್ಟ್ ನಲ್ಲಿರುವ ಆರ್ ಟಿಐ ಕಾರ್ಯಕರ್ತರ ಹೆಸರು ತೆಗೆಯಲು ಆರ್ ಟಿಐ
ಕಾರ್ಯಕರ್ತ ಸಾಯಿಬಣ್ಣ ಸಾಸಿ ಬೆನಕನಹಳ್ಳಿಯಿಂದ 3 ಲಕ್ಷ ರೂ, ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈಗಾಗಲೇ ₹1ಲಕ್ಷ ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡಿದ್ದ ಆಯುಕ್ತರು ಇದೀಗ ಉಳಿದ ಹಣವನ್ನು ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಗೀತಾ ಬೇನಾಳ್ ನೈತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಸದ್ಯ ಗುರುನಾಥ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ.

ಎಸ್‌.ಪಿ ಬಿಕೆ. ಉಮೇಶ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೀತಾ ಬೆನಾಳ, ಪೊಲೀಸ್ ಇನ್‌ಸ್ಪೆಕ್ಟರ್ ಅರುಣ್ ಕುಮಾರ್ ಹಾಗೂ ಸಿಬ್ಬಂದಿಯವರಾದ ಮಲ್ಲಿನಾಥ್, ಹನುಮಂತ, ಬಸವರಾಜ್, ಪೈಮೊದಿನ್, ತಂಡದಿಂದ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments