Webdunia - Bharat's app for daily news and videos

Install App

ಚಿಕ್ಕಮಗಳೂರಿನಲ್ಲಿ ಅಮಾನವೀಯ ಘಟನೆ: 30 ಮಂಗಗಳ ಮಾರಣಹೋಮ

sampriya
ಶನಿವಾರ, 8 ಜೂನ್ 2024 (12:38 IST)
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು ಬಳಿಕ 30 ಮಂಗಗಳನ್ನು ಹತ್ಯೆ ಮಾಡಿರುವ ದಾರುಣ ವರದಿಯಾಗಿದೆ.

ಜಿಲ್ಲೆಯ ಎನ್​​.ಆರ್​.ಪುರ ತಾಲೂಕಿನ ದ್ಯಾವಣ ಗ್ರಾಮದ ನಡೆದಿದೆ. ಬಾಳೆಹಣ್ಣು ತಿಂದು ಮಂಗಗಳು ಜ್ಞಾನ ತಪ್ಪಿದ ಬಳಿಕ ತಲೆಗೆ ಹೊಡೆದು 16 ಗಂಡು, 14 ಹೆಣ್ಣು ಹಾಗೂ 4 ಮರಿಗಳನ್ನು ಹತ್ಯೆ ಮಾಡಲಾಗಿದೆ.  ಬಳಿಕ ಅವುಗಳನ್ನು ತಂದು ರಸ್ತೆಗೆ ಎಸೆಯಲಾಗಿದೆ.  

ವಿಷಯ ತಿಳಿದು ವಿವಿಧ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಡಿ.ಎಫ್.ಓ, ಆರ್.ಎಫ್.ಓ, ಪಿ.ಎಸ್.ಐ, ಪಶುಸಂಗೋಪನೆ, ಪಶುವೈದ್ಯ, ಪಂಚಾಯಿತಿ ಅಧಿಕಾರಿಗಳು ಹಾಗೂ ಆಶಾಕಾರ್ಯರ್ತೆಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಾಲ್ಕು ಮರಿಗಳನ್ನು ಒಳಗೊಂಡಂತೆ ಈ 30 ಕೋತಿಗಳಿಗೆ ವಿಷಕಾರಿ ಪದಾರ್ಥವನ್ನು ನೀಡಿ ನಂತರ ಥಳಿಸಿ ಸಾಯಿಸಲಾಗಿದೆ ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments