Publish Date: Fri, 28 Dec 2018 (16:00 IST)
Updated Date: Fri, 28 Dec 2018 (16:02 IST)
ಶ್ರೀರಾಮನ ಕುರಿತು ಸಾಹಿತಿ ಕೆ.ಎಸ್.ಭಗವಾನ್ ಅವಹೇಳನಕಾರಿ ಮಾಡಿರುವ ಆರೋಪಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
ಕಲಬುರಗಿಯಲ್ಲಿ ಪೇಜಾವರ ಶ್ರೀ ಸೇನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಗಿದೆ.
ರಾಮ ಮಂದಿರ ಏಕೆ ಬೇಡ ಎಂಬ ಕೃತಿಯನ್ನು ನಿಷೇಧ ಮಾಡುವಂತೆ ಪ್ರತಿಭಟನಕಾರರು ಒತ್ತಾಯ ಮಾಡಿದರು.
ಕೆ.ಎಸ್.ಭಗವಾನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಅವರು, ರಾಮನ ಕುರಿತು ಅವಹೇಳನ ಮಾಡಿದ ಭಗವಾನ್ ರನ್ನು ಬಂಧಿಸಿ ಗಡಿಪಾರು ಮಾಡಲು ಆಗ್ರಹ ಮಾಡಿದರು. ಎರಡು ದಿನಗಳಲ್ಲಿ ಬಂಧಿಸದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.