Select Your Language

Notifications

webdunia
webdunia
webdunia
webdunia

ತಾಯಿ ಅಗಳಿಕೆಯಲ್ಲು 3 ದಿನ ಕರ್ತವ್ಯ ಹಾಜರಾದ ಖಾಕಿ

ತಾಯಿ ಅಗಳಿಕೆಯಲ್ಲು 3 ದಿನ ಕರ್ತವ್ಯ ಹಾಜರಾದ ಖಾಕಿ
ಬೆಂಗಳೂರು , ಶನಿವಾರ, 24 ಸೆಪ್ಟಂಬರ್ 2022 (16:29 IST)

ಒಂದೇ ವಾರದಲ್ಲಿ ನಿರಂತರವಾಗಿ ಕಳ್ಳತನ ಪ್ರಕರಣಗಳು ಅವಳಿ ನಗರದಲ್ಲಿ ನಡೆದಿದ್ದವು. ಆಗ ಉಪನಗರ ಠಾಣೆಯಲ್ಲಿಯೂ ಕೂಡ ಕಳ್ಳತನವಾಗಿತ್ತು. ಈ ಸಂದರ್ಭದಲ್ಲಿ ಇನ್ಸ್ ಪೆಕ್ಟರ್ ರವಿಚಂದ್ರ ಅವರ ತಾಯಿ ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿದ್ದರು. ಆದರೆ ತಾಯಿ ಅಗಲಿಕೆ ನಡುವೆಯೇ ಮೂರು ದಿನಗಳಲ್ಲಿ ಕರ್ತವ್ಯಕ್ಕೆ ಹಾಜರಾದ ರವಿಚಂದ್ರ ಅವರು ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿತನ ಬಗ್ಗೆ ಮಾಹಿತಿ ಕಲೆಹಾಕಿದ ಅವರು, ಬಳ್ಳಾರಿ ಮೂಲದ ಗಣೇಶ್ ಕಾಲೋನಿಯ 26 ವರ್ಷದ ಶ್ರೀಕಾಂತ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ನಗರದ ಮಿಷನ್ ಕಂಪೌಂಡ ಹತ್ತಿರ ಮನಿಯೊಂದರಲ್ಲಿ 3,20,000 ಕಿಮ್ಮತ್ತಿನ 71 ಗ್ರಾಂ ತೂಕದ ಬಂಗಾರದ ಆಭರಣಗಳು ಹಾಗೂ 1,00,000 ನಗದು ಕಳ್ಳತನ ಮಾಡಿಕೊಂಡು ಹೋಗಿದ್ದ. ಇದಲ್ಲದೇ ಮೂರು ಪ್ರಕರಣಗಳಲ್ಲಿ ಭಾಗಿ ಆಗಿದ್ದು ಒಟ್ಟು 6,95,000/- ರೂ ಕಿಮ್ಮತ್ತಿನ 165 ಗ್ರಾಂ ತೂಕದ ಬಂಗಾರದ ಆಭರಣಗಳು ಹಾಗೂ 1,000/- ರೂ ಕಿಮ್ಮತ್ತಿನ 20 ಗ್ರಾಂ ತೂಕದ ಬೆಳ್ಳಿ ಆಭರಣ ಮತ್ತು 30,000/- ನಗದು ಹಣವನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಹಾಜರಪಡಿಸಿ ಜೈಲಿಗೆ ಅಟ್ಟಿದ್ದು, ರವಿಚಂದ್ರ ಅವರ ಕಾರ್ಯಕ್ಕೆ ಪೊಲೀಸ್ ಆಯುಕ್ತ ಲಾಬೂರಾಮ್ ಬಹುಮಾನ ಘೋಷಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಬಾಲಾಕಿಯ ಮೇಲೆ ಲೈಂಗಿಕ ದೌರ್ಜನ್ಯ ,