Select Your Language

Notifications

webdunia
webdunia
webdunia
webdunia

ಇನ್ಸ್ಟಾಗ್ರಾಮ್ ಪ್ರೀತಿ 3 ತಿಂಗಳಿಗೆ ಮುಕ್ತಾಯ ,ಯುವತಿ ಆತ್ಮಹತ್ಯೆ

ಇನ್ಸ್ಟಾಗ್ರಾಮ್ ಪ್ರೀತಿ 3 ತಿಂಗಳಿಗೆ ಮುಕ್ತಾಯ ,ಯುವತಿ ಆತ್ಮಹತ್ಯೆ
ಬೆಂಗಳೂರು , ಶುಕ್ರವಾರ, 8 ಜುಲೈ 2022 (15:51 IST)
ಸಾಮಾಜಿಕ ಜಾಲತಾಣದಿಂದ ಪರಿಚಯವಾದ ಯುವಕನ ಜತೆ ಪ್ರೀತಿಗೆ ಬಿದ್ದು ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಲವ್​ ಫೇಲ್ಯೂರ್​ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ವಿದ್ಯಾರ್ಥಿನಿ ಪವಿತ್ರಾ!
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕುರಬೂರು ಸರ್ಕಾರಿ ಕೃಷಿ ಮಹಾವಿದ್ಯಾಲಯದಲ್ಲಿ ಬಿ.ಎಸ್ಸಿ ಅಗ್ರೀಕಲ್ಚರ್ ಓದುತ್ತಿದ್ದ ಪವಿತ್ರಾ ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನ ಪ್ರೀತಿಯ ಬಲೆಗೆ ಬಿದ್ದು ಜೀವ ಕಳೆದುಕೊಂಡಿದ್ದಾಳೆ. ಕಾಲೇಜಿನ ವಸತಿ ನಿಲಯದಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.
 
ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಮೊಬೈಲ್​ನಲ್ಲಿ ವಿಡಿಯೋ ಮಾಡಿಟ್ಟು ಭಗ್ನಪ್ರೇಮದ ಕುರಿತು ಮಾಹಿತಿ ನೀಡಿದ್ದಾಳೆ. ಜತೆಗೆ ಡೆತ್​ನೋಟ್​ ಕೂಡ ಬರೆದಿಟ್ಟಿದ್ದಾಳೆ.
 
ಇನ್ಟಾಗ್ರಾಂ ನಲ್ಲಿ ಪರಿಚಯವಾದ ಹುಡಗನ ಜೊತೆ ಲವ್ ಮಾಡಿದ್ದು, ಈಗ ಲವ್​ ಫೇಲ್ಯೂರ್​ ಆಗಿದೆ. ಈ ಹಿನ್ನೆಲೆಯಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿದ್ಯಾರ್ಥಿನಿ ಹೇಳಿದ್ದಾಳೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಪುಟ್ಟ ಬಾಲಕನೊಂದಿಗೆ ರಾಕ್ಷಸನಂತೆ ವರ್ತಿಸಿದ ಶಿಕ್ಷಕ