Webdunia - Bharat's app for daily news and videos

Install App

ಆ್ಯಂಬುಲೆನ್ಸ್​​​ಗೆ GPS ಅಳವಡಿಸಿ - ಹೈಕೋರ್ಟ್​​​

Webdunia
ಬುಧವಾರ, 9 ನವೆಂಬರ್ 2022 (17:30 IST)
ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆ್ಯಂಬುಲೆನ್ಸ್​​ಗಳಿಗೆ GPS ವ್ಯವಸ್ಥೆಯನ್ನು ಅಳವಡಿಸಬೇಕು ಎಂದು ಹೈಕೋರ್ಟ್​​​ ನಿರ್ದೇಶಿಸಿದೆ. ಈ ಸಂಬಂಧ ಭಾರತ್​​​ ಪುನರುತ್ಥಾನ ಟ್ರಸ್ಟ್​​ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ P.B. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಾಪೀಠ ಈ ಕುರಿತು ಆದೇಶಿಸಿದೆ. ವಿಚಾರಣೆ ವೇಳೆ ಸರ್ಕಾರಿ ವಕೀಲರು GPS ಅಳವಡಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ 2020ರ ಮಾರ್ಚ್​​ 4ರಂದು ಸಾರಿಗೆ ಮತ್ತು ಪ್ರಾದೇಶಿಕ ರಸ್ತೆ ಸುರಕ್ಷತಾ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದು ನ್ಯಾಯಾಪೀಠಕ್ಕೆ ತಿಳಿಸಿದರು. ಇದನ್ನು ಪರಿಗಣಿಸಿದ ನ್ಯಾಯಾಪೀಠ ಆ್ಯಂಬುಲೆನ್ಸ್​ಗಳ ತಡೆರಹಿತ ಸಂಚಾರಕ್ಕೆ ಅಗತ್ಯ ವ್ಯವಸ್ಥೆಯನ್ನು ಒದಗಿಸುವ ನಿಟ್ಟಿನಲ್ಲಿ GPS ಅಳವಡಿಸುವಂತೆ ರಾಜ್ಯದಲ್ಲಿನ ಆ್ಯಂಬುಲೆನ್ಸ್​​ ತಯಾರಿಕೆಗೆ ನಿರ್ದೇಶನ ನೀಡಬೇಕು   ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments