Webdunia - Bharat's app for daily news and videos

Install App

ತುಂಗಭದ್ರಾ ಡ್ಯಾಮ್‌ಗೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ: ನಿಟ್ಟುಸಿರು ಬಿಟ್ಟ ಲಕ್ಷಾಂತರ ರೈತರು

Sampriya
ಭಾನುವಾರ, 18 ಆಗಸ್ಟ್ 2024 (09:48 IST)
ಕೊಪ್ಪಳ: ತುಂಗಭದ್ರಾ ಡ್ಯಾಮ್‌ನಲ್ಲಿ ಮುರಿದಿದ್ದ 19ನೇ ಗೇಟ್‍ನಲ್ಲಿ ಎಲ್ಲಾ ಐದು ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿಯಾಗಿದೆ. ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ತಂಡ ಮೂರು ದಿನಗಳ ಪ್ರಯತ್ನಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ.

ಶುಕ್ರವಾರ ಮೊದಲ ಎಲಿಮೆಂಟ್ ಅಳವಡಿಸಲಾಗಿತ್ತು. ಶನಿವಾರ ಸಂಜೆ ಎಲ್ಲಾ ಸ್ಟಾಪ್ ಲಾಗ್ ಅಳವಡಿಕೆಯಿಂದಾಗಿ ಡ್ಯಾಂನಿಂದ ಹೊರ ಹೋಗುತ್ತಿದ್ದ ನೀರು ಬಂದ್ ಆಗಿದೆ. ಈ ಮೂಲಕ ಪೋಲಾಗುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದು, ಈ ಭಾಗದ ಲಕ್ಷಾಂತರ ರೈತರು ನಿಟ್ಟುಸಿರುಬಿಟ್ಟಿದ್ದಾರೆ.

ಸದ್ಯ ಜಲಾಶಲಯದ ಎಲ್ಲ 33 ಗೇಟ್‍ಗಳನ್ನು ಮುಚ್ಚಲಾಗಿದೆ ಎಂದು ಟಿಬಿ ಡ್ಯಾಂ ಮಂಡಳಿ ತಿಳಿಸಿದೆ. ಸ್ಟಾಪ್ ಲಾಗ್ ಅಳವಡಿಕೆಯಿಂದಾಗಿ 70 ಟಿಎಂಸಿಯಷ್ಟು ನೀರು ಉಳಿಸಲು ಸಾಧ್ಯವಾಗಿದೆ. ಇನ್ನು ಆ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಇದುವರೆಗೆ ಪೋಲಾದ ನೀರು ಮತ್ತೆ ತುಂಬಿಕೊಳ್ಳುವ ವಿಶ್ವಾಸ ಮೂಡಿದೆ. ಸದ್ಯ ಜಲಾಶಯಕ್ಕೆ 41 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 

ಈ ಬಗ್ಗೆ ಪ್ರತಿಕ್ರಿಯಿಸಿರುವ ಡ್ಯಾಂ ತಜ್ಞ ಕನ್ನಯ್ಯ ನಾಯ್ಡು, ರೈತರ ಬದುಕು ಹಸನುಗೊಳಿಸಲು ನಾನು ಈ ಇಳಿವಯಸ್ಸಿನಲ್ಲೂ ದೂರದ ಹೈದರಾಬಾದ್‍ನಿಂದ ಆಗಮಿಸಿ ಸ್ಟಾಪ್ ಲಾಗ್ ಗೇಟ್ ಅಳವಡಿಸಿರುವೆ. ಹರಿಯುವ ನೀರಿನಲ್ಲೇ ಗೇಟ್ ಅಳವಡಿಕೆ ಸವಾಲಿನ ಕೆಲಸ ಆಗಿತ್ತು. ಆದರೂ ನಮ್ಮ ಮನೆ ದೇವರಾದ ತಿರುಪತಿ ತಿಮ್ಮಪ್ಪನ ಆಶೀರ್ವಾದದಿಂದ ಯಶಸ್ಸು ಸಾಧಿಸಿದ್ದೇವೆ. ನನಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

ಟಿಬಿ ಡ್ಯಾಂನ 19ನೇ ಗೇಟ್ ನಲ್ಲಿ ಸ್ಟಾಪ್ ಲಾಗ್ ಅಳವಡಿಸುವ ಪ್ರಕ್ರಿಯೆ ಯಶಸ್ವಿಯಾಗಿ ಮುಗಿದಿದೆ. ಸದ್ಯ ಡ್ಯಾಂನಿಂದ ಪೋಲಾಗುತ್ತಿದ್ದ ನೀರನ್ನು ನಿಲ್ಲಿಸುವಲ್ಲಿ ತಂಡ ಯಶಸ್ವಿಯಾಗಿದೆ. ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ದುರಸ್ತಿ ಕಾರ್ಯ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಸರಲ್ಲಿ ಕಲ್ಲು ಹುಡುಕುವ ಕಾಂಗ್ರೆಸ್ ಪಕ್ಷ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Bengaluru: ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್‌

Shashi Tharoor: ಮೋದಿಯನ್ನು ಹೊಗಳಿದ ಕೈ ಸಂಸದ ಶಶಿ ತರೂರ್ ಗೆ ಸಿಕ್ತು ಭರ್ಜರಿ ಬಹುಮಾನ

ಪಾಕಿಸ್ತಾನದೊಂದಿಗೆ ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಹೇಳೋದೇ ಬೇರೆ

ಆಪರೇಷನ್ ಸಿಂಧೂರ್ ಬಗ್ಗೆ ಅಪಪ್ರಚಾರ ಮಾಡಲು ಕಾಂಗ್ರೆಸ್ ನಾಯಕರಿಗೆ ಟಾಸ್ಕ್

ಮುಂದಿನ ಸುದ್ದಿ
Show comments