Select Your Language

Notifications

webdunia
webdunia
webdunia
webdunia

ದೇಶದ ಮೊದಲ ಭೂಗತ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸ್ಥಾಪನೆ

ದೇಶದ ಮೊದಲ ಭೂಗತ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸ್ಥಾಪನೆ
bangalore , ಗುರುವಾರ, 7 ಸೆಪ್ಟಂಬರ್ 2023 (14:20 IST)
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ದೇಶದ ಮೊದಲ ಭೂಗತ ವಿದ್ಯುತ್ ಪರಿವರ್ತಕ ಕೇಂದ್ರವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸಿದರು. ಮಲ್ಲೇಶ್ವರಂನ 15ನೇ ಅಡ್ಡರಸ್ತೆಯಲ್ಲಿ ಬೆಸ್ಕಾಂ  ಹಾಗೂ ಬಿಬಿಎಂಪಿ  ಸಹಭಾಗಿತ್ವದಲ್ಲಿ 1.98 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಇದು 500 ಕೆ.ವಿ.ಎ ಸಾಮರ್ಥ್ಯದ ಟ್ರಾನ್ಸ್ಫಾರ್ಮ ಇದಾಗಿದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಮಾತ್ರ ವಿದ್ಯುತ್ ಪರಿವರ್ತಕ ಭೂಗತ ಕೇಂದ್ರಗಳಿವೆ. ಅಲ್ಲಿನ ಸರ್ಕಾರಗಳು ಸಾರ್ವಜನಿಕರ ಅನುಕೂಲತೆ ಮತ್ತು ಸುರಕ್ಷತೆ ಗಮನದಲ್ಲಿಟ್ಟುಕೊಂಡು ಈ ಕೇಂದ್ರಗಳನ್ನು ನಿರ್ಮಾಣ ಮಾಡಿವೆ. ಇದೀಗ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ದೇಶದಲ್ಲಿ ಮೊದಲ ಬಾರಿಗೆ ಭೂಗತ ವಿದ್ಯುತ್ ಪರಿವರ್ತಕ ಕೇಂದ್ರ ಸ್ಥಾಪಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಕ್ಕದ ಮನೆಯ ನಾಯಿ ರೇಬಿಸ್ನಿಂದ ಬಾಲಕ ಸಾವು