ಕಾಂಗ್ರೆಸ್ ಸಮಾವೇಶ ವೇದಿಕೆ ಬಳಿ ದಿಢೀರ್ ಬೆಂಕಿ

Webdunia
ಬುಧವಾರ, 2 ಮೇ 2018 (12:58 IST)
ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಕಾಂಗ್ರೆಸ್ ಸಮಾವೇಶದ ವೇದಿಕೆ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. 
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಬಿ.ಆರ್.ಪಾಟೀಲ ಪರ ಏರ್ಪಡಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಸಿಎಂ ಭಾಗವಹಿಸಿದ್ದರು. 
 
ಸಿದ್ದರಾಮಯ್ಯ, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಿಎಂ ಇಬ್ರಾಹಿಂ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ರು. ಭಾಷಣ ಮುಗಿಸಿ ಸಿಎಂ ವೇದಿಕೆಯಿಂದ ಕೆಳಗಿಳಿದು ಕಾರ್ ಹತ್ತಿ ಹೋದ ಕೆಲ ನಿಮಿಷಗಳಲ್ಲಿಯೇ ವೇದಿಕೆ ಪಕ್ಕ ಬೃಹತ್ ಆಕಾರದಲ್ಲಿ ಬೆಂಕಿ ಕಾಣಿಸಲಾರಂಭಿಸಿತು. 
 
ಕಾಂಗ್ರೆಸ್ ಸಮಾವೇಶಕ್ಕಾಗಿ ಹಾಕಿದ್ದ ಶಾಮಿಯಾನ ಪಕ್ಕದಲ್ಲಿದ್ದ ಅಂಗಡಿಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ರು. ಏಕಾಏಕಿಯಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕಾಂಗ್ರೆಸ್ ಕಾರ್ಯಕರ್ತರು ಕೆಲಕಾಲ ಗಲಿಬಿಲಿ ಹಾಗೂ ಆತಂಕಕ್ಕೆ ಒಳಗಾದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಹಾವೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ತುಂಡಾಗಿ ಬಿದ್ದ ವಿದ್ಯುತ್ ತಂತಿ, 900ಕ್ಕೂ ಅಧಿಕ ಅಡಕೆ ಸಸಿಗಳು ನಾಶ

2025ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂಗಾಂಗ ದಾನ, ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ

ಸಿಎಂ ಕುರ್ಚಿ ಗುದ್ದಾಟದ ನಡುವೆ ಜನರ ಆಶೀರ್ವಾದವಿರಬೇಕೆಂದ ಸಿದ್ದರಾಮಯ್ಯ, ಭಾರೀ ಕುತೂಹಲ

ಮುಂದಿನ ಸುದ್ದಿ
Show comments