Select Your Language

Notifications

webdunia
webdunia
webdunia
webdunia

ಸರ್ವೀಸ್ ರಸ್ತೆಯನ್ನ ಸರಿಯಾಗಿ ನಿರ್ವಹಣೆ ಮಾಡಲು ಬಿಬಿಎಂಪಿ ಆಯುಕ್ತರ ಸೂಚನೆ

Instructio
bangalore , ಗುರುವಾರ, 19 ಜನವರಿ 2023 (20:11 IST)
ನಗರದ ಹೆಣ್ಣೂರು ಜಂಕ್ಷನ್ ಬಳಿಯ ಹೊರ ವರ್ತುಲ ರಸ್ತೆ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಇದರಿಂದ ಸರ್ವೀಸ್ ರಸ್ತೆಯಲ್ಲಿ ಹೆಚ್ಚು ವಾಹನಗಳು ಸಂಚರಿಸುತ್ತಿವೆ. ಈ ಸಂಬಂಧ ಸರ್ವೀಸ್ ರಸ್ತೆ ಹಾಗೂ ಪಾದಚಾರಿ ಮಾರ್ಗದ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳುವ ಸಲುವಾಗಿ ಕೂಡಲೆ ಟೆಂಡರ್ ಕರೆದು ಕೆಲಸ ಪ್ರಾರಂಭಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಹೊರ ವರ್ತುಲ ರಸ್ತೆ ಮಾರ್ಗದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಲೇಔಟ್ ಮಾಡುವ ವೇಳೆ ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆ ಮಧ್ಯಭಾಗದಲ್ಲಿರುವ ಉದ್ಯಾನವನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದನ್ನು ಗಮನಿಸಿ ಅದನ್ನು ಸರಿಯಾಗಿ ನಿರ್ವಹಣೆ ಮಾಡಬೇಕು ಹಾಗೂ ಸರ್ವೀಸ್ ರಸ್ತೆಯನ್ನು ಸರಿಯಾಗಿ ನಿರ್ವಹಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಮತಗಟ್ಟೆಗಳ ಪರಿಶೀಲನೆ