Select Your Language

Notifications

webdunia
webdunia
webdunia
webdunia

ರೂಪಾ, ರೋಹಿಣಿ ಸಿಂಧೂರಿಗೆ ನೋಟಿಸ್ ನೀಡಲು ಸೂಚನೆ

ರೂಪಾ, ರೋಹಿಣಿ ಸಿಂಧೂರಿಗೆ ನೋಟಿಸ್ ನೀಡಲು ಸೂಚನೆ
ಬೆಂಗಳೂರು , ಸೋಮವಾರ, 20 ಫೆಬ್ರವರಿ 2023 (11:56 IST)
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರ ನಡುವಿನ ಕಿತ್ತಾಟ ಅತಿರೇಕಕ್ಕೇರಿದ ಬೆನ್ನಲ್ಲೇ ಇಬ್ಬರಿಗೂ ನೋಟಿಸ್ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ವಂದಿತಾ ಅವರಿಗೆ ಸೂಚಿಸಿದ್ದಾರೆ.

ಈಗ ನಡೆಯುತ್ತಿರುವ ಇಬ್ಬರ ಕಚ್ಚಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇವತ್ತೇ ಇಬ್ಬರಿಗೂ ಸ್ಪಷ್ಟನೆ ಕೇಳಿ ನೋಟಿಸು ಜಾರಿಗೊಳಿಸುವ ಸಾಧ್ಯತೆಯಿದೆ.

ಅಧಿಕಾರಿಗಳ ನಡುವಿನ ಕಿತ್ತಾಟದ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ಅಧಿಕಾರಿಗಳ ಈ ವರ್ತನೆಗಳಿಂದ ನನಗೆ ಬಹಳ ಬೇಸರವಾಗಿದೆ.

ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ಜನ ದೇವಮಾನವರೆಂದುಕೊಂಡಿದ್ದಾರೆ. ಆದರೆ ಇವರಿಂದ ಎಲ್ಲಾ ಅಧಿಕಾರಿಗಳಿಗೂ ಅಪಮಾನವಾಗಿದೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ