Select Your Language

Notifications

webdunia
webdunia
webdunia
webdunia

ಮಳೆಹಾನಿ ಸಂಬಂಧಿಸಿದ ದೂರುಗಳನ್ನು ಕೂಡಲೆ ಪರಿಹರಿಸಲು ಸೂಚನೆ

ಮಳೆಹಾನಿ ಸಂಬಂಧಿಸಿದ ದೂರುಗಳನ್ನು ಕೂಡಲೆ ಪರಿಹರಿಸಲು ಸೂಚನೆ
bangalore , ಮಂಗಳವಾರ, 23 ಮೇ 2023 (14:11 IST)
bbmp
ದೂರವಾಣಿ ಮುಖಾಂತರ ಮಳೆಹಾನಿ ಸಂಬಂಧಿಸಿದ ದೂರುಗಳ ವಿವರವನ್ನ  ತುಷಾರ್ ಗಿರಿನಾಥ್  ಪಡೆದರು.ಕೇಂದ್ರ ಕಛೇರಿಯಲ್ಲಿರುವ ಕಂಟ್ರೋಲ್ ರೂಂಗೆ ಖುದ್ದಾಗಿ ತುಷಾರ್ ಗಿರಿನಾಥ್  ಭೇಟಿ ನೀಡಿದರು.ನಂತರ ದೂರುಗಳ ಮಾಹಿತಿಯನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ದೂರುಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತದನಂತರ ಪಾಲಿಕೆ ಕೇಂದ್ರ ಕಚೇರಿಯ ಅನೆಕ್ಸ್-3 ಕಟ್ಟಡದ 6ನೇ ಮಹಡಿಯಲ್ಲಿರುವ ಕೊಮ್ಯಾಂಡ್ ಕಂಟ್ರೋಲ್ ಸೆಂಟರ್ ಗೆ ಭೇಟಿ ನೀಡಿ ಸಹಾಯ ತಂತ್ರಾಂಶದ ಮುಖಾಂತರ ಬಂದಿರುವ ವಲಯವಾರು ಮಳೆಹಾನಿ ಸಂಬಂಧಿಸಿದ ದೂರುಗಳ ಪರಿಶೀಲನೆ ನಡೆಸಿದ್ದಾರೆ.ಸಹಾಯ ತಂತ್ರಾಂಶದಲ್ಲಿ ಸುಮಾರು  70 ದೂರು ಪಡೆದಿದ್ದಾರೆ.ಮೂರು  ದಿನಗಳೊಳಗಾಗಿ ಬಂದಿರುವಂತಹ ದೂರುಗಳನ್ನು ಪರಿಹರಿಸಲು ಸೂಚನೆ ನೀಡಿದ್ದಾರೆ.ನಿರಾಕರಿಸಿದಲ್ಲಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಶಿಸ್ತು ಕ್ರಮ ವಹಿಸುವುದಾಗಿ ಹೇಳಿದ್ದಾರೆ.ವಿಪತ್ತು ನಿರ್ವಹಣೆಗಾಗಿ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ,ಪೊಲೀಸ್ ಇಲಾಖೆಯಿಂದ ನೋಡಲ್ ಅಧಿಕಾರಿಯನ್ನು ತಕ್ಷಣವೇ ನೇಮಕೆಕ್ಕೆ ಕ್ರಮ ಕೈಗೊಳ್ಳಲಾಗಿದೆ.ಈ ವೇಳೆ ಶ್ರೀ ಉಜ್ವಲ್ ಕುಮಾರ್ ಗೋಷ್ ಹಾಗೂ ಬಿಬಿಎಂಪಿ ಉಪ ಆಯುಕ್ತರು ಶ್ರೀ ಮಂಜುನಾಥ ಸ್ವಾಮಿ.ಬಿ.ಎಸ್ ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೆ.ಆರ್ ಸರ್ಕಲ್ ಘಟನೆ ವೇಳೆ ಕರ್ತವ್ಯ ಮೆರೆದ ಸಿಬ್ಬಂದಿಗೆ ಪ್ರಶಂಶನಾ ಪತ್ರ