Publish Date: Mon, 15 Jun 2020 (21:11 IST)
Updated Date: Mon, 15 Jun 2020 (21:13 IST)
ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿಗೆ ಹೊಂದಿದವರಿಗೆ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ.
ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಇರುವ ಬೇಡಿಕೆ ಕುರಿತಂತೆ ಸಮೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗಳು ಇರುವ ಹಿನ್ನೆಲೆಯಲ್ಲಿ ಈ ಸಮೀಕ್ಷೆ ನಡೆಸುವಂತೆ ಸೂಚನೆ ನೀಡಿದ್ದಾರೆ.
ಇನ್ನು, ಸಭೆಯಲ್ಲಿ ಕ್ರೈಸ್ ವಸತಿ ಶಾಲೆಗಳಲ್ಲಿ 660 ಶಿಕ್ಷಕರು ಮತ್ತು 183 ಪದವಿಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. 993 ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ ದಾಖಲಾತಿ ಪರಿಶೀಲನೆ ಹಂತದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ಶಿಕ್ಷಣ ಇಲಾಖೆ ನೆರವಿನೊಂದಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಿದರು.