Select Your Language

Notifications

webdunia
webdunia
webdunia
webdunia

ಹಿಂದುತ್ವದ ಅವಹೇಳನ, ರಾಹುಲ್ ಗಾಂಧಿ ಕ್ಷಮೆಯಾಚಿಸಲಿ : ಯಡಿಯೂರಪ್ಪ

ಹಿಂದುತ್ವದ ಅವಹೇಳನ, ರಾಹುಲ್ ಗಾಂಧಿ ಕ್ಷಮೆಯಾಚಿಸಲಿ : ಯಡಿಯೂರಪ್ಪ
ಬೆಂಗಳೂರು , ಬುಧವಾರ, 13 ಸೆಪ್ಟಂಬರ್ 2023 (12:01 IST)
ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ವಿದೇಶೀ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರು ಕ್ಷಮೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷವನ್ನು ನಿರಂತರವಾಗಿ ಸಂಘಟನೆ ಮಾಡಬೇಕು. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಶ್ರಮಿಸಬೇಕು.

100 ದಿನಗಳಲ್ಲಿ ಸಿದ್ದರಾಮಯ್ಯನವರ ಸರ್ಕಾರವು ಜನಪ್ರಿಯತೆ ಕಳೆದುಕೊಂಡಿದೆ. ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಸಿದ್ದರಾಮಯ್ಯನವರ ಸರ್ಕಾರದ ಜನವಿರೋಧಿ ನೀತಿಯನ್ನು ಜನರಿಗೆ ತಿಳಿಸಬೇಕು ಅಂತ ಸಭೆಯಲ್ಲಿ ಹೇಳಿದ್ದಾರೆ.

ಇನ್ನು ತಮ್ಮ ಜಿಲ್ಲಾ ಪ್ರವಾಸ ಬಗ್ಗೆ ಮಾತಾಡಿದ ಯಡಿಯೂರಪ್ಪ, ಇದೇ 18ರಿಂದ ಕುರುಡುಮಲೆಯಿಂದ ಬಿಜೆಪಿಯ ರಾಜ್ಯಾದ್ಯಂತ ರಾಜಕೀಯ ಪ್ರವಾಸ ಆರಂಭವಾಗಲಿದೆ. ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಸ್‍ಗೆ ಟ್ರಕ್ ಡಿಕ್ಕಿಯಿಂದ 11 ಮಂದಿ ದುರ್ಮರಣ!