Publish Date: Sat, 25 Jan 2020 (18:21 IST)
Updated Date: Sat, 25 Jan 2020 (18:22 IST)
ರಾಜ್ಯದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶ ರವಾನೆ ಮಾಡಲಾಗುತ್ತಿದೆ.
ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳಿಂದ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಸಂದೇಶ ರವಾನೆ ಮಾಡಲಾಗ್ತಿದೆ.
ಹೀಗಾಗಿ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಜೆಡಿಎಸ್ ದೂರು ದಾಖಲು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದಿಂದ ದೂರು ಸಲ್ಲಿಕೆ ಮಾಡಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದು, ಸೈಬರ್ ಕ್ರೈಮ್ ಪೊಲೀಸರಿಗೂ ದೂರು ನೀಡಿದ್ದಾರೆ ಜೆಡಿಎಸ್ ಮುಖಂಡರು.