Publish Date: Tue, 07 Jul 2026 (18:09 IST)
Updated Date: Tue, 07 Jul 2026 (18:12 IST)
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಅನ್ನು ಘೋಷಿಸಲಾಗಿದೆ.
ಭಾರೀ ಮಳೆಯ ಮುನ್ನೆಚ್ಚರಿಕೆಯಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಸೇರಿದಂತೆ ಮಳೆಯ ತೀವ್ರತೆ ಹೆಚ್ಚಿರುವ ತಾಲ್ಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ