Select Your Language

Notifications

webdunia
webdunia
webdunia
webdunia

ನಾಳೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಮೆಟ್ರೋ ಸೇವೆಯಲ್ಲಿ ಮಹತ್ವದ ಬದಲಾವಣೆ

International  Yoga Day
ಬೆಂಗಳೂರು: ನಾಳೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬೆಳಿಗ್ಗೆ 5ಗಂಟೆಯಿಂದಲೇ ಮೆಟ್ರೊ ರೈಲು ಸೇವೆ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ(ಬಿಎಂಆರ್‌ಸಿಎಲ್‌) ಪ್ರಕಟಣೆಯಲ್ಲಿ ತಿಳಿಸಿದೆ.

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿರುವ ಯೋಗ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಸುಲಭವಾಗಿ ಭಾಗವಹಿಸುವ ಹಿನ್ನೆಲೆ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಈ ನಿರ್ಧಾರ ಕೈಗೊಳ್ಳಲಾಗಿದೆ. 

ಇನ್ನೂ ಭಾನುವಾರ  ಬೆಳಿಗ್ಗೆ 7 ಗಂಟೆಗೆ ಮೆಟ್ರೊ ಆರಂಭವಾಗುತ್ತದೆ. ಆದರೆ, ಯೋಗ ದಿನಾಚರಣೆ ಅಂಗವಾಗಿ ಎಲ್ಲ ಮೆಟ್ರೊ ಮಾರ್ಗದ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 5 ಗಂಟೆಗೆ ಸೇವೆ ಆರಂಭವಾಗಲಿದೆ. 

ಸಾರ್ವಜನಿಕರು ಈ ವಿಶೇಷ ಸೌಲಭ್ಯವನ್ನು ಬಳಸಿಕೊಳ್ಳಿ ಎಂದು ಮನವಿ ಮಾಡಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಡದಿ ಟೌನ್‌ಶಿಪ್ ವಿರೋಧಿಸಿ ಪಾದಯಾತ್ರೆ: ನಿಖಿಲ್ ಕುಮಾರಸ್ವಾಮಿಗೆ ನಾಳೆ ಕೈಜೋಡಿಸಲಿದ್ದಾರೆ ಸಾವಿರಾರು ರೈತರು