ಕುಶಾಲನಗರದಲ್ಲಿ ಬಿಜೆಪಿಯ 9 ಮಂದಿಯ ವಿಚಾರಣೆ

Webdunia
ಶುಕ್ರವಾರ, 19 ಆಗಸ್ಟ್ 2022 (18:08 IST)
ಮಾಜಿ ಸಿಎಂ ಸಿದ್ದರಾಮಯ್ಯಗೆ ಕುಶಾಲನಗರದಲ್ಲಿ ಮೊಟ್ಟೆ ಎಸೆದ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿದೆ. ಪಕ್ಷ ಅಥವಾ ಸಂಘಟನೆಗೆ ಸಂಬಂಧವಿಲ್ಲದ ಮೂರನೇ ವ್ಯಕ್ತಿಯೊಬ್ಬ ಕಾರಿಗೆ ಮೊಟ್ಟೆ ಎಸೆದು ಪ್ರತಿಭಟನೆ ದಿಕ್ಕು ತಪ್ಪಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿಗರ ಪ್ರತಿಭಟನೆ ನ್ಯಾಯಯುತವಾಗಿತ್ತು. ಆದರೆ ಮೊಟ್ಟೆ ಎಸೆದದ್ದು ಬೇರೆಯವರು ಎಂದು ಶಾಸಕ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಈ ಸಂಬಂಧ ಸೋಮವಾರಪೇಟೆಯ ವ್ಯಕ್ತಿಯ ಮೇಲೆ ಪೊಲೀಸರು ನಿಗಾವಹಿಸಿದ್ದು ಹೆಚ್ಚಿನ ವಿಚಾರಣೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ. ಇನ್ನು ಪ್ರತಿಭಟನೆ ಸಂದರ್ಭ ಅತಿರೇಕ ವರ್ತನೆಗೆ ಕಾರಣರಾದ ಕೂಡು ಮಂಗಳೂರು ಗ್ರಾ.ಪಂ. ಉಪಾಧ್ಯಕ್ಷ ಭಾಸ್ಕರ್ ನಾಯಕ್, ಸೋಮವಾರಪೇಟೆ ಮಂಡಲ ವಕ್ತಾರ ಕೆ.ಜಿ.ಮನು ಎಂಬುವವರನ್ನು ಪ್ರತಿಭಟನಾ ಸ್ಥಳದಲ್ಲೇ ಪೊಲೀಸರು ವಶಕ್ಕೆ ಪಡೆದಿದ್ದರು. ಇವರೊಂದಿಗೆ ಸ್ವಯಂ ಪ್ರೇರಿತರಾಗಿ ಬಂದ ಇತರೆ 7 ಮಂದಿ ಸೇರಿ 9 ಮಂದಿ ವಿರುದ್ಧ ಕುಶಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರ ಪರವಾಗಿ ಕೊಡಗು ಜಿಲ್ಲಾ ಶಾಸಕರುಗಳಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ ಠಾಣೆಗೆ ಆಗಮಿಸಿ ಬಿಡುಗಡೆಗೊಳಿಸುವಲ್ಲಿ ಮುಂದಾಳತ್ವ ವಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

46 ಆಲ್‌ ಇಂಡಿಯಾ ಟಾಫರ್‌ಗಳಿಗೆ ಪ್ರಧಾನಿ ಮೋದಿಯಿಂದ ಗೌರವ

ಮೋದಿ ಭೇಟಿ ಬಳಿಕ ವಯನಾಡು ಮಂದಿ ಪಡೆದದ್ದು ಬರೀ ನಿರ್ಲಕ್ಷ್ಯ: ಪ್ರಿಯಾಂಕಾ ಗಾಂಧಿ ಕಿಡಿ

Karnataka Weather: ವಾರಂತ್ಯಕ್ಕೆ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments