Select Your Language

Notifications

webdunia
webdunia
webdunia
webdunia

ತಮಿಳುನಾಡು, ಕೇರಳದಲ್ಲೂ ತನಿಖೆ ಚುರುಕು : ಪ್ರವೀಣ್ ಸೂದ್

webdunia
ಬೆಂಗಳೂರು , ಗುರುವಾರ, 24 ನವೆಂಬರ್ 2022 (09:49 IST)
ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ಗೆ ಸಂಬಂಧಿಸಿದಂತೆ ತಮಿಳುನಾಡು, ಕೇರಳ ಎಲ್ಲಾ ಕಡೆಗಳಲ್ಲೂ ತನಿಖೆ ಚುರುಕುಗೊಳಿಸಲಾಗಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ.

ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾರೀಕ್ ಕೃತ್ಯಕ್ಕೆ ಹಣದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಈಗಲೇ ಎಲ್ಲ ಮಾಹಿತಿಗಳನ್ನು ಬಹಿರಂಗಗೊಳಿಲು ಸಾಧ್ಯವಿಲ್ಲ.

ಸದ್ಯ ಆರೋಪಿಯ ಪ್ರಾಣ ಉಳಿಸಬೇಕು, ಅದು ನಮಗೆ ಅತೀ ಅಗತ್ಯ. ಅವನ ವಿಚಾರಣೆ ಬಳಿಕ ಮತ್ತಷ್ಟು ಸತ್ಯ ಹೊರಗೆ ಬರುತ್ತೆ. ಈಗಲೇ ಎಲ್ಲ ಮಾಹಿತಿಯನ್ನು ಬಹಿರಂಗಗೊಳಿಸಿದ್ರೆ ಮುಂದಿನ ವಿಚಾರಣೆಗೆ ತೊಂದರೆಯಾಗುತ್ತದೆ ಎಂದು ತಿಳಿಸಿದರು. 


Share this Story:

Follow Webdunia kannada

ಮುಂದಿನ ಸುದ್ದಿ

ನಶೆಯಲ್ಲಿ ಕುಟುಂಬಸ್ಥರನ್ನು ಕತ್ತು ಸೀಳಿ ಕೊಲೆಗೈದ !?