Select Your Language

Notifications

webdunia
webdunia
webdunia
webdunia

ರವಿ ಚನ್ನಣ್ಣನವರ್ ಮೇಲೆ ತನಿಖೆ ನಡೆಯುತ್ತಿದೆ

ರವಿ ಚನ್ನಣ್ಣನವರ್ ಮೇಲೆ ತನಿಖೆ ನಡೆಯುತ್ತಿದೆ
ಬೆಂಗಳೂರು , ಬುಧವಾರ, 2 ಫೆಬ್ರವರಿ 2022 (18:42 IST)
ಸಾರ್ವಜನಿಕರು ತಮ್ಮ ಹೊಣೆಗಾರಿಕೆ ಅರಿಯುವ ತನಕ ಪೊಲೀಸರಿಂದ ಕಾನೂನಾತ್ಮಕ ಕ್ರಮ ಅನಿವಾರ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಯಾವರಿಂದ ಟೋಯಿಂಗ್ ವಿಚಾರದಲ್ಲಿ ಜನರಿಗೆ ಸಮಸ್ಯೆಯಾಗುತ್ತಿದೆ.
ಹೆಚ್ಚಿನ ಕಮಿಷನ್‌ ಗಾಗಿ ಜನರಿಗೆ ತೊಂದರೆ ಕೊಟ್ಟಿರುವುದು ಸತ್ಯ. ಸದ್ಯಕ್ಕೆ ಟೋಯಿಂಗ್ ನಿಲ್ಲಿಸಲಾಗಿದೆ.
 
ಇಂದು ಸಂಜೆ ಸಭೆ ನಡೆಸಲಾಗುತ್ತದೆ. ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆಸಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು. ಇದೇ ವೇ ಳೆ ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಅವರ ವಿರುದ್ದ ಬಂದಿರುವ ಆರೋಪ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಯಾರು ಬೇಕಾದರೂ ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ದೂರಿನ ಆಧಾರದಲ್ಲಿ ತನಿಖೆ ಆರಂಭ ವಾಗಿದೆ. ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಅಷ್ಟೇ. ಅದು ಶಿಕ್ಷೆ ಅಥವಾ ಬೇರೆನೋ ಅಲ್ಲ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಳ್ಳತನಕ್ಕೆ ಟ್ರೈನಿಂಗ್ ನೀಡುತ್ತಿದ್ದ ಖತರ್ನಾಕ್ ಬಂಧನ